Home
Deal of the day

ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳಿಗೆ ಈಗ ಹೆಚ್ಚಿನ ರಿಯಾಯಿತಿ!

ಅಮೆಜಾನ್ ಪ್ಲಾಟ್‌ಫಾರ್ಮ್ ಶಾಪಿಂಗ್ ಪ್ರಿಯರನ್ನು ಸೆಳೆಯಲು ಒಂದಿಲ್ಲೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಸಾಗಿ ಬಂದಿದೆ. ಮುಖ್ಯವಾಗಿ ಹಬ್ಬದ ದಿನಗಳಂದು ಕೊಡುಗೆಗಳ ಸುರಿಮಳೆ ಸುರಿಸುತ್ತದೆ. ಫೋನ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಸ್ಪೆಷಲ್ ರಿಯಾಯಿತಿ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆಯುತ್ತದೆ. ಇನ್ನು ಯಾವದೇ ಹಬ್ಬದ ಸೇಲ್‌ ನಲ್ಲಿ ಆಯ್ದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿಗಳನ್ನು ತಿಳಿಸುತ್ತದೆ.

ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನ್‌ಗಳಿಗೆ ಈಗ ಹೆಚ್ಚಿನ ರಿಯಾಯಿತಿ!

ಆಫರ್‌ನಲ್ಲಿ ಗ್ಯಾಡ್ಜೆಟ್ಸ್‌ ಖರೀದಿಗೆ ಅಮೆಜಾನ್ ಇ ಕಾಮರ್ಸ್‌ ಅತ್ಯುತ್ತಮ ತಾಣವಾಗಿ ಗುರುತಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್‌ ಪ್ರತಿಷ್ಠಿತ ಬ್ರ್ಯಾಂಡ್‌ನ ಮೊಬೈಲ್ ಫೋನ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಸ್ಮಾರ್ಟ್‌ ಉತ್ಪನ್ನಗಳಿಗೆ ಸ್ಪೆಷಲ್ ಕೊಡುಗೆ ನೀಡುತ್ತದೆ. ಆಯ್ದ ಕೆಲವು ಅಗ್ಗದ ಫೋನ್‌ಗಳು ಆಫರ್‌ನಲ್ಲಿ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್ ಸೇಲ್‌ನಲ್ಲಿ ಕಡಿಮೆ ದರದಲ್ಲಿ ಕಾಣಿಸಿಕೊಂಡಿರುವ ಅಗ್ಗದ ಸ್ಮಾರ್ಟ್‌ಫೋನ್‌ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4 GB RAM + 64 GB ಮತ್ತು 6 GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 2GB RAM / 3GB RAM ಮತ್ತು 32 GB ಆಂತರೀಕ ಸಂಗ್ರಹದ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಹಿಂಬದಿಯಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್ 5,000 mAh ಬ್ಯಾಟರಿಯನ್ನ ಬ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ರಿಯಲ್‌ಮಿ ನಾರ್ಜೊ 50A ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Sale 2022: Best Deals On Realme Narzo 50A, Tecno Spark 8T and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+