Home
Deal of the day

ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್!

ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಈ ವಿಶೇಷ ಸೇಲ್ ಆಯೋಜಿಸಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್‌ ನೀಡುತ್ತದೆ. ಹೀಗಾಗಿ ಬಹುತೇಕರಿಗೆ ಅಮೆಜಾನ್ ಫೇವರೇಟ್ ಶಾಪಿಂಗ್ ತಾಣ ಎನಿಸಿದೆ ಆಗಿದೆ. ಜನಪ್ರಿಯ ಕಂಪನಿಗಳ ಇತ್ತೀಚಿನ ಮೊಬೈಲ್‌ಗಳಿಗೂ ಆಫರ್‌ ನೀಡಿ, ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್!

ಅಮೆಜಾನ್‌ ಇ ಕಾಮರ್ಸ್‌ ಸೇಲ್‌ನಲ್ಲಿ ಫೋನ್‌ಗಳಿಗೆ ಅತ್ಯುತ್ತಮ ಡಿಸ್ಕೌಂಟ್ ನೀಡುತ್ತದೆ. ಹಾಗೆಯೇ ಈ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾದರಿಯ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಜೊತೆಗೆ ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಬೆಸ್ಟ್‌ ಆಫರ್ ನೀಡಿರುತ್ತದೆ. ಹಾಗೆಯೇ ಅಮೆಜಾನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳಿಗೂ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಐದು ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ.‌ ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ A74 5G ಸ್ಮಾರ್ಟ್‌ಫೋನ್‌
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Sale 2022: Best Deals On Samsung Galaxy M12, Redmi Note 10s and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+