Home
Deal of the day

ಅಮೆಜಾನ್‌ ಈ ಸ್ಮಾರ್ಟ್‌ಫೋನ್‌ಗಳ ಮೇಲೆ 30% ಡಿಸ್ಕೌಂಟ್‌ ಆಫರ್‌ ನೀಡುತ್ತಿದೆ!

ಅಮೆಜಾನ್‌ ತಾಣ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಶೇಷ ದಿನಗಳಲ್ಲಿ ಡಿಸ್ಕೌಂಟ್‌ ಮೇಳಗಳನ್ನು ನಡೆಸುವ ಮೂಲಕ ಭಾರಿ ರಿಯಾಯಿತಿಗಳನ್ನು ನೀಡುತ್ತಾ ಬಂದಿದೆ. ಇದಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಕೂಡ ಒಂದಿಲ್ಲೊಂದು ಆಫರ್‌ ಅನ್ನು ಗ್ರಾಹಕರಿಗೆ ನೀಡಲಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಸಾಮಾನ್ಯ ದಿನಗಳಲ್ಲಿಯೂ ವಿಶೇಷ ಡಿಸ್ಕೌಂಟ್‌ ಲಭ್ಯವಾಗಲಿದೆ.

ಅಮೆಜಾನ್‌ ಈ ಸ್ಮಾರ್ಟ್‌ಫೋನ್‌ಗಳ ಮೇಲೆ 30% ಡಿಸ್ಕೌಂಟ್‌ ಆಫರ್‌ ನೀಡುತ್ತಿದೆ!

ಹೌದು, ಅಮೆಜಾನ್‌ ತಾಣದಲ್ಲಿ ಪ್ರತಿನಿತ್ಯವೂ ಒಂದಿಲ್ಲೊಂದು ಆಫರ್‌ ಲಭ್ಯವಿರುತ್ತದೆ. ಆನ್‌ಲೈನ್‌ ಶಾಪಿಂಗ್‌ ಮಾಡುವ ಗ್ರಾಹಕರಿಗಾಗಿ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಡಿಸ್ಕೌಂಟ್‌ ಲಭ್ಯವಾಗಲಿದೆ. ಸದ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿವೆ. ನೀವು ಕೂಡ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸಿದರೆ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಅಮೆಜಾನ್‌ನಲ್ಲಿ ರಿಯಾಯಿತಿ ಪಡೆದುಕೊಂಡಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 Go-ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದು, ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿರುತ್ತದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.9 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು AI ಅನ್ನು ಕ್ವಾಡ್ ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದು 32 ದಿನಗಳ ಸ್ಟ್ಯಾಂಡ್‌ಬೈ ಮತ್ತು 183 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಅನ್ನು ನೀಡುತ್ತದೆ.

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ನಾಲ್ಕನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಅದೇ ರೀತಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇದು 90 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ.

ಐಫೋನ್ 12
ಐಫೋನ್ 12 6.1 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು, ಅಧಿಕ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಇದು A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದ್ದು, 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

English summary
amazon sale 2022 best deals on smartphones with up to 30 percent off
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+