Home
Deal of the day

ಅಮೆಜಾನ್‌ನಲ್ಲಿ ಈ ರೆಡ್ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಕೊಡುಗೆ!

ಜನಪ್ರಿಯ ಇ ಕಾಮರ್ಸ್ ದೊಡ್ಡಣ್ಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಏನಾದರೊಂದು ಬೊಂಬಾಟ್ ಸೇಲ್‌ ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತ ಇರುತ್ತದೆ. ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆನ್‌ಲೈನ್‌ ಶಾಪಿಂಗ್ ಪ್ರಿಯರಿಗೆ ಫೇವರೇಟ್‌ ಶಾಪಿಂಗ್ ಅಡ್ಡಾ ಎನಿಸಿದೆ. ಹಬ್ಬದ ಸಂದರ್ಭಗಳಲ್ಲಿ ಹಾಗೂ ವಿಶೇಷ ದಿನಗಳಲ್ಲಿ ಮೊಬೈಲ್‌ಗಳಿಗೆ ಮತ್ತಷ್ಟು ಹೆಚ್ಚಿನ ರಿಯಾಯಿತಿ ನೀಡುತ್ತದೆ.

ಅಮೆಜಾನ್‌ನಲ್ಲಿ ಈ ರೆಡ್ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಕೊಡುಗೆ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಮುಖ್ಯವಾಗಿ ಮೊಬೈಲ್‌ ಫೋನ್‌ಗಳಿಗೆ ಅತ್ಯುತ್ತಮ ರಿಯಾಯಿತಿ ಲಭ್ಯ ಮಾಡುತ್ತದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್‌ ಉತ್ಪನ್ನಗಳಿಗೆ ಬೊಂಬಾಟ್ ಆಫರ್ ಲಭ್ಯ ಮಾಡಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್‌ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗೆಯೇ ಆಯ್ದ ಕೆಲವು ಜನಪ್ರಿಯ ಶಿಯೋಮಿ ರೆಡ್ಮಿ ಮೊಬೈಲ್‌ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌ ಲಭ್ಯ ಇದೆ. ಹಾಗಾದರೇ ಅಮೆಜಾನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶಿಯೋಮಿ ರೆಡ್ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB + 128 GB, 8GB + 256 GB ಮತ್ತು 12 GB + 256 GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128 GB ಹಾಗೂ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ 9 ಸ್ಮಾರ್ಟ್‌ಫೋನ್
ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.

ರೆಡ್ಮಿ ನೋಟ್ 10 ಪ್ರೊ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್‌ಮಿ ನೋಟ್ 10s
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Sale 2022: Best Deals On These Redmi Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+