Home
Deal of the day

ಅಮೆಜಾನ್‌ ತಾಣದಲ್ಲಿ ಈ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ!

ಪ್ರಮುಖ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಅತ್ಯುತ್ತಮ ಕೊಡುಗೆಗಳ ಮೂಲಕ ಸದ್ಯ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ತಾಣವು ಬೊಂಬಾಟ್ ಡಿಸ್ಕೌಂಟ್‌ಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಮುಖ್ಯವಾಗಿ ಮೊಬೈಲ್, ಲ್ಯಾಪ್‌ಟಾಪ್‌ ಸೇರಿದಂತೆ ಎಲೆಕ್ಟ್ರಾನಿಕ್ ಉತ್ಪನ್ನಗಳು ಹಾಗೂ ಇತರೆ ಉತ್ಪನ್ನಗಳಿಗೂ ಅಧಿಕ ರಿಯಾಯಿತಿ ತಿಳಿಸುತ್ತದೆ. ಹಬ್ಬದ ಸೇಲ್ ಹಾಗೂ ಸ್ಪೆಷಲ್ ಸೇಲ್‌ ಗಳಲ್ಲಿ ಅಧಿಕ ಕೊಡುಗೆಗಳನ್ನು ಗ್ರಾಹಕರಿಗೆ ಲಭ್ಯ ಮಾಡುತ್ತದೆ.

ಅಮೆಜಾನ್‌ ತಾಣದಲ್ಲಿ ಈ ಮೊಬೈಲ್‌ಗಳಿಗೆ ಭಾರೀ ರಿಯಾಯಿತಿ!

ಟೆಕ್ ಉತ್ಪನ್ನಗಳಿಗೆ ನೇರ ಆಫರ್ ಲಭ್ಯ ಮಾಡುವ ಜೊತೆಗೆ ಅಮೆಜಾನ್‌ ಗ್ರಾಹಕರಿಗೆ ಅತ್ಯುತ್ತಮ ವಿನಿಮಯ ಆಫರ್ ಸಹ ನೀಡುತ್ತದೆ. ಇನ್ನು ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬಜೆಟ್‌ ಬೆಲೆಯ ಫೋನ್‌ಗಳಿಂದ, ಹೈ ಎಂಡ್‌ ಮಾದರಿಯ ಮೊಬೈಲ್‌ ಫೋನ್‌ಗಳಿಗೂ ಆಫರ್ ಲಭ್ಯ ಮಾಡಿರುತ್ತದೆ. ಪ್ರಸ್ತುತ ಭಿನ್ನ ಬೆಲೆಯ ಮೊಬೈಲ್‌ಗಳಿಗೂ ಅಮೆಜಾನ್‌ ಆಕರ್ಷಕ ಕೊಡುಗೆಯನ್ನು ಘೋಷಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ ಇರುವ ಕೆಲವು ಸ್ಮಾರ್ಟ್‌ಫೋನ್‌ಗಳ ಕೊಡುಗೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4 GB RAM + 64 GB ಮತ್ತು 6 GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ 9A ಸ್ಪೋರ್ಟ್ ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000 mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ 8GB RAM ಹೊಂದಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು 16 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಗೋ ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Sale 2022: Best Deals on These Top Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+