20ಎಂಪಿ ಸೆಲ್ಫಿ ಕ್ಯಾಮೆರಾ ಫೋನ್‌ಗಳಿಗೆ ಇಲ್ಲಿದೆ ಭರ್ಜರಿ ಡಿಸ್ಕೌಂಟ್!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಅಮೆಜಾನ್ ಅತ್ಯುತ್ತಮ ಡಿಸ್ಕೌಂಟ್ ಮಾರಾಟ ಮೇಳಗಳ ಮೂಲಕ ಶಾಪಿಂಗ್ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್ ಡಿವೈಸ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್ ನೀಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಅಮೆಜಾನ್ ಫೇವರೇಟ್ ಶಾಪಿಂಗ್ ಪ್ಲಾಟ್‌ಫಾರ್ಮ್ ಎನಿಸಿದೆ ಆಗಿದೆ. ಜನಪ್ರಿಯ ಬ್ರ್ಯಾಂಡ್‌ಗಳ ನೂತನ ಫೋನ್‌ಗಳಿಗೂ ಆಫರ್ ನೀಡಿ, ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಇನ್ನು ಅಮೆಜಾನ್ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ಡಿಸ್ಕೌಂಟ್ ನೀಡುತ್ತದೆ. ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾಡೆಲ್‌ಗಳ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಅತ್ಯುತ್ತಮ ಆಫರ್ ಲಭ್ಯ ಮಾಡಿದೆ. ಹಾಗೆಯೇ ಅಮೆಜಾನ್ 20ಎಂಪಿ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ನ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ 20ಎಂಪಿ ಸೆಲ್ಫಿ ಕ್ಯಾಮೆರಾ ರಚನೆಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 11.3 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 12GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.


Click it and Unblock the Notifications