5G ಫೋನ್ ಖರೀದಿಸುವ ಯೋಚನೆ ಇದೆಯೇ?..ಹಾಗಿದ್ರೆ ಇದುವೇ ಅತ್ಯುತ್ತಮ ಸಮಯ!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳ ಪೈಕಿ ಅಮೆಜಾನ್ ಜನಪ್ರಿಯತೆ ಪಡೆದಿದೆ. ಅಮೆಜಾನ್ ತಾಣವು ಸ್ಮಾರ್ಟ್‌ಫೋನ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಹೆಚ್ಚಿನ ರಿಯಾಯಿತಿ ಘೋಷಿಸುತ್ತದೆ. ಸ್ಪೆಷಲ್ ಕೊಡುಗೆ ತಿಳಿಸುವ ಮೂಲಕ ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಅಡ್ಡಾ ಆಗಿ ಕಾಣಿಸಿಕೊಂಡಿದೆ. ಕೆಲವೊಂದು ವಿಶೇಷ ಸಂದರ್ಭದ ಮಾರಾಟಗಳಲ್ಲಿ ಬೊಂಬಾಟ್ ಕೊಡುಗೆಗಳನ್ನು ಗ್ರಾಹಕರಿಗೆ ಲಭ್ಯ ಮಾಡುತ್ತದೆ.

5G ಫೋನ್ ಖರೀದಿಸುವ ಯೋಚನೆ ಇದೆಯೇ?..ಹಾಗಿದ್ರೆ ಇದುವೇ ಅತ್ಯುತ್ತಮ ಸಮಯ!

ಹಾಗೆಯೇ ಅಮೆಜಾನ್‌ ತಾಣವು ಗ್ರಾಹಕರಿಗೆ ಆಕರ್ಷಕ ಎಕ್ಸ್‌ಚೇಂಜ್‌ ಕೊಡುಗೆಗಳನ್ನು ಸಹ ನೀಡುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್‌ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೂ ಅಧಿಕ ಆಫರ್ ಲಭ್ಯ ಮಾಡಿರುತ್ತದೆ. ಕೊಡುಗೆಯಲ್ಲಿ ನೂತನವಾಗಿ ಬಿಡುಗಡೆ ಆಗಿರುವ ಫೋನ್‌ಗಳು ಸೇರಿರುತ್ತವೆ. ಸದ್ಯ 5G ಮಾದರಿಯ ಕೆಲವು ಸ್ಮಾರ್ಟ್‌ಫೋನ್‌ಗಳಿಗೂ ಅಮೆಜಾನ್‌ ಭರ್ಜರಿ ಕೊಡುಗೆಯನ್ನು ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದ ಆಯ್ದ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Redmi Note 10T 5G (Graphite Black, 4GB RAM, 64GB Storage) | Dual5G | 90Hz Adaptive Refresh Rate | MediaTek Dimensity 700 7nm Processor
₹14,999.00
₹16,999.00
12%

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Samsung Galaxy M32 5G (Sky Blue, 8GB RAM, 128GB Storage)
₹18,999.00
₹25,999.00
27%

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB, 8GB RAM ಮತ್ತು 128 GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

OnePlus Nord CE 5G (Blue Void, 8GB RAM, 128GB Storage)
₹24,999.00

iQOO Z3 5G ಸ್ಮಾರ್ಟ್‌ಫೋನ್‌
iQOO Z3 ಸ್ಮಾರ್ಟ್‌ಫೋನ್‌ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

iQOO Z3 5G (Ace Black, 8GB RAM, 128GB Storage) | India's First SD 768G 5G Processor | 55W FlashCharge | Upto 9 Months No Cost EMI | 6 Months Free Screen Replacement
₹18,990.00
₹24,990.00
24%

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

OPPO A74 5G (Fluid Black,6GB RAM,128GB Storage) - 5G Android Smartphone | 5000 mAh Battery | 18W Fast Charge | 90Hz LCD Display
₹15,990.00
₹20,990.00
24%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X