Home
Deal of the day

ನಿಮಗೆ ಬಿಗ್‌ ಬ್ಯಾಟರಿ ಸ್ಮಾರ್ಟ್‌ಫೋನ್‌ ಅಗತ್ಯವೇ?..ಹಾಗಿದ್ರೆ ಈ ಕೊಡುಗೆ ನೋಡಿ!

ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್ ಒಂದಿಲ್ಲೊಂದು ಮಾರಾಟ ಮೇಳ ಆಯೋಜಿಸುತ್ತಲೆ ಮುನ್ನಡೆದಿದೆ. ಮಾರಾಟ ಮೇಳಗಳಲ್ಲಿ ಗ್ಯಾಡ್ಜೆಟ್ಸ್‌ಗಳಿಗೆ ಭರ್ಜರಿ ರಿಯಾಯಿತಿ ನೀಡವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಅದರಲ್ಲಿಯೂ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ ಡಿವೈಸ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ ಲಭ್ಯ ಮಾಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ಫೇವರೇಟ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿದೆ.

ನಿಮಗೆ ಬಿಗ್‌ ಬ್ಯಾಟರಿ ಸ್ಮಾರ್ಟ್‌ಫೋನ್‌ ಅಗತ್ಯವೇ?..ಹಾಗಿದ್ರೆ ಈ ಕೊಡುಗೆ ನೋಡಿ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಈ ವಿಶೇಷ ಸೇಲ್‌ನಲ್ಲಿ ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್‌ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಇತ್ತೀಚಿಗೆ ಲೀಡಿಂಗ್‌ನಲ್ಲಿರುವ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳು ಸಹ ಭರ್ಜರಿ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್ ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಪೊಕೊ M3 ಫೋನ್
ಈ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ 6GB RAM + 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಪಡೆದಿದೆ. ಪೊಕೊ M3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

English summary
Amazon Sale 2022: Best Discount On These 6000mah Battery Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+