ಅಮೆಜಾನ್‌ನಲ್ಲಿ ಈ ಕ್ವಾಡ್‌ ಕ್ಯಾಮೆರಾ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!

ಇ ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ ಆಕರ್ಷಕ ಡಿಸ್ಕೌಂಟ್‌ ಮಾರಾಟ ಮೇಳಗಳ ಮೂಲಕ ಶಾಪಿಂಗ್ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಸಾಧನಗಳಿಗೆ ಅಧಿಕ ಡಿಸ್ಕೌಂಟ್‌ ನೀಡುತ್ತದೆ. ಈ ನಿಟ್ಟಿನಲ್ಲಿ ಅನೇಕರಿಗೆ ಅಮೆಜಾನ್ ಅಚ್ಚುಮೆಚ್ಚಿನ ಶಾಪಿಂಗ್ ತಾಣ ಎನಿಸಿದೆ ಆಗಿದೆ. ಜನಪ್ರಿಯ ಬ್ರ್ಯಾಂಡ್‌ಗಳ ನೂತನ ಫೋನ್‌ಗಳಿಗೂ ಆಫರ್‌ ನೀಡಿ, ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಅಮೆಜಾನ್‌ನಲ್ಲಿ ಈ ಕ್ವಾಡ್‌ ಕ್ಯಾಮೆರಾ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!

ಇನ್ನು ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ಡಿಸ್ಕೌಂಟ್ ನೀಡುತ್ತದೆ. ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾಡೆಲ್‌ಗಳ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಬೆಸ್ಟ್‌ ಆಫರ್ ನೀಡಿರುತ್ತದೆ. ಹಾಗೆಯೇ ಅಮೆಜಾನ್ ಕ್ವಾಡ್‌ ಕ್ಯಾಮೆರಾ ರಚನೆಯ ಸ್ಮಾರ್ಟ್‌ಫೋನ್‌ಗಳಿಗೂ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಕ್ವಾಡ್‌ ಕ್ಯಾಮೆರಾ ರಚನೆಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ.‌ ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.

Redmi Note 10 Pro (Dark Night, 6GB RAM, 128GB Storage) -120hz Super Amoled Display|64MPwith 5mp Super Tele-Macro

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Samsung Galaxy M12 (Black,4GB RAM, 64GB Storage) 6000 mAh with 8nm Processor | True 48 MP Quad Camera | 90Hz Refresh Rate
₹10,299.00
₹12,999.00
21%

ರೆಡ್ಮಿ ನೋಟ್ 10S ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Redmi Note 10S (Deep Sea Blue, 6GB RAM, 64GB Storage) -Super Amoled Display | 64 MP Quad Camera | Alexa Built in
₹12,999.00
₹16,999.00
24%

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

OPPO A74 5G (Fantastic Purple,6GB RAM,128GB Storage) - 5G Android Smartphone | 5000 mAh Battery | 18W Fast Charge | 90Hz LCD Display
₹15,990.00
₹20,990.00
24%

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

Samsung Galaxy M32 (Black, 6GB RAM, 128GB Storage) 6 Months Free Screen Replacement for Prime
₹16,999.00
₹18,999.00
11%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X