Home
Deal of the day

ಭಾರೀ ಡಿಸ್ಕೌಂಟ್‌ನಲ್ಲಿ ಹೊಸ ಫೋನ್ ಖರೀದಿಸಲು ಇದುವೇ ಅತ್ಯುತ್ತಮ ಕೊಡುಗೆ!

ಲೀಡಿಂಗ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ವಿಶೇಷ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಫೇವರೇಟ್ ಎನಿಸಿದೆ. ಈ ತಾಣವು ಮುಖ್ಯವಾಗಿ ಸ್ಮಾರ್ಟ್‌ಫೋನ್, ಮೊಬೈಲ್, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಬೊಂಬಾಟ್ ಕೊಡುಗೆ ನೀಡುತ್ತದೆ. ಇನ್ನು ಮಾರಾಟ ಮೇಳ ಇಲ್ಲದ ವೇಳೆಯು ಅತ್ಯುತ್ತಮ ರಿಯಾಯಿತಿ ಲಭ್ಯ ಮಾಡಿರುತ್ತದೆ.

ಭಾರೀ ಡಿಸ್ಕೌಂಟ್‌ನಲ್ಲಿ ಹೊಸ ಫೋನ್ ಖರೀದಿಸಲು ಇದುವೇ ಅತ್ಯುತ್ತಮ ಕೊಡುಗೆ!

ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಪೆಷಲ್ ಮಾರಾಟ ಮೇಳ ಆಯೋಜಿಸುವ ಮೂಲಕ ಜನಪ್ರಿಯ ಕಂಪನಿಗಳ ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ ಲಭ್ಯ ಮಾಡುತ್ತದೆ. ಹಾಗೆಯೇ ಬಜೆಟ್‌ ದರದ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್‌ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A15s ಸ್ಮಾರ್ಟ್‌ಫೋನ್‌
ಒಪ್ಪೋ A15s ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 Go ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ವಿವೋ V21 5G ಸ್ಮಾರ್ಟ್‌ಫೋನ್‌
ವಿವೋ V21 5G ಸ್ಮಾರ್ಟ್‌ಫೋನ್‌ 1,080x2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್‌
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

English summary
Amazon Sale 2022: Best Discount On These Top Selling Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+