Home
Deal of the day

ಭರ್ಜರಿ ಆಫರ್‌ನಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿದೆ ಅತ್ಯುತ್ತಮ ಕೊಡುಗೆ!

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರಾಹಕರನ್ನು ಸೆಳೆಯಲು ಒಂದಿಲ್ಲೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಸಾಗಿ ಬಂದಿದೆ. ಮುಖ್ಯವಾಗಿ ಹಬ್ಬದ ದಿನಗಳಂದು ಹೆಚ್ಚಿನ ಕೊಡುಗೆಗಳನ್ನು ನೀಡುತ್ತದೆ. ಮಾರಾಟದಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಇನ್ನು ಯಾವುದೇ ಹಬ್ಬದ ಸೇಲ್‌ ಇಲ್ಲದ ವೇಳೆಯು ಸಹ ಆಯ್ದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿಗಳನ್ನು ತಿಳಿಸುತ್ತದೆ.

ಭರ್ಜರಿ ಆಫರ್‌ನಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿದೆ ಅತ್ಯುತ್ತಮ ಕೊಡುಗೆ!

ಭಾರೀ ಕೊಡುಗೆಯಲ್ಲಿ ಮೊಬೈಲ್‌ ಖರೀದಿಗೆ ಅಮೆಜಾನ್ ಇ ಕಾಮರ್ಸ್‌ ಅತ್ಯುತ್ತಮ ತಾಣವಾಗಿ ಗುರುತಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್‌ ಪ್ರಮುಖ ಬ್ರ್ಯಾಂಡ್‌ನ ಮೊಬೈಲ್ ಫೋನ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಸ್ಮಾರ್ಟ್‌ ಉತ್ಪನ್ನಗಳಿಗೆ ಸ್ಪೆಷಲ್ ಕೊಡುಗೆ ನೀಡುತ್ತದೆ. ಆಯ್ದ ಕೆಲವು ಫೋನ್‌ಗಳು ಆಫರ್‌ ಬೆಲೆಗೆ ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್ ಸೇಲ್‌ನಲ್ಲಿ ಕಾಣಿಸಿಕೊಂಡಿರುವ ಸ್ಮಾರ್ಟ್‌ಫೋನ್‌ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ V21 5G ಸ್ಮಾರ್ಟ್‌ಫೋನ್‌
ವಿವೋ V21 5G ಸ್ಮಾರ್ಟ್‌ಫೋನ್‌ 1,080 x 2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್‌ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒಪ್ಪೊ A31 ಸ್ಮಾರ್ಟ್‌ಫೋನ್‌
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಇದು 4 GB + 64 GB ವೇರಿಯಂಟ್ ಮತ್ತು 6 GB + 128 GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12 ಎಂಪಿ ಸೆನ್ಸಾರ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್‌
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

English summary
Amazon Sale 2022: Best Discount On These Top Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+