Home
Deal of the day

10,000ರೂ. ಒಳಗಿನ ಫೋನ್‌ಗಳಿಗೂ ಸಿಗುತ್ತೆ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್ ಇ ಕಾಮರ್ಸ್‌ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ. ಅಮೆಜಾನ್ ತಾಣವು ಗ್ಯಾಡ್ಜೆಟ್ಸ್‌ ಸೇರಿದಂತೆ ಎಲ್ಲ ಬಗೆಯ ಉತ್ಪನ್ನಗಳಿಗೂ ಅತ್ಯುತ್ತಮ ರಿಯಾಯಿತಿ ನೀಡುವ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಫೇವರೇಟ್ ತಾಣ ಆಗಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಲಭ್ಯ ಮಾಡಿರುತ್ತದೆ.

10,000ರೂ. ಒಳಗಿನ ಫೋನ್‌ಗಳಿಗೂ ಸಿಗುತ್ತೆ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್‌ ತಾಣದಲ್ಲಿ ಪ್ರಸ್ತುತ ಎಲ್ಲ ಮಾದರಿಯ ಮೊಬೈಲ್‌ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ನೀಡಿದೆ. ಆ ಪೈಕಿ ಎಂಟ್ರಿ ಲೆವೆಲ್ ಮಾದರಿಯ ಫೋನ್‌ಗಳು ಸೇರಿವೆ. 10,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡಿದೆ. ಹೀಗಾಗಿ ಅಗ್ಗದ ಫೋನ್‌ಗಳು, ಮತ್ತಷ್ಟು ಅಗ್ಗದ ಬೆಲೆ ಪಡೆದಿವೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಅಗ್ಗದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 9A ಸ್ಪೋರ್ಟ್ ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ HD + LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000 mAh ಬ್ಯಾಟರಿ ಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4 GB RAM + 64 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ ಗೋ 2022 ಫೋನ್‌
ಟೆಕ್ನೋ ಸ್ಪಾರ್ಕ್ ಗೋ 2022 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ಸೆ ನ್ಸಾರ್‌ ಎಫ್ / 1.8 ಲೆನ್ಸ್ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾ AI ಬೆಂಬಲಿತ ಆಗಿಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

English summary
Amazon Sale 2022: Best Discount On These Under Rs 10,000 Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+