Home
Deal of the day

ಹೊಸ ಶಿಯೋಮಿ ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಇಲ್ಲಿದೆ ಬೊಂಬಾಟ್ ಆಫರ್!

ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಆಕರ್ಷಕ ರಿಯಾಯಿತಿ ಮಾರಾಟ ಮೇಳಗಳ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ದೈತ್ಯ ಇ ಕಾಮರ್ಸ್ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಹಾಗೂ ಇತರೆ ಗ್ಯಾಡ್ಜೆಟ್ಸ್‌ ಡಿವಯಸ್‌ಗಳಿಗೆ ಹೆಚ್ಚಿನ ರಿಯಾಯಿತಿ ನೀಡುತ್ತದೆ. ಹೀಗಾಗಿ ಬಹುತೇಕರಿಗೆ ಅಮೆಜಾನ್ ಫೇವರೇಟ್ ತಾಣ ಆಗಿದೆ. ಜನಪ್ರಿಯ ಸಂಸ್ಥೆಗಳ ನೂತನ ಫೋನ್‌ಗಳಿಗೂ ಆಫರ್‌ ಲಭ್ಯ ಮಾಡಿ, ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಹೊಸ ಶಿಯೋಮಿ ಫೋನ್‌ ಖರೀದಿಸಬೇಕೆ?..ಹಾಗಿದ್ರೆ, ಇಲ್ಲಿದೆ ಬೊಂಬಾಟ್ ಆಫರ್!

ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ದೊರೆಯುವಂತೆ ಮಾಡಿರುತ್ತದೆ. ಇನ್ನು ಅಮೆಜಾನ್ ತಾಣದಲ್ಲಿ ಎಲ್ಲ ಶ್ರೇಣಿಯ ಫೋನ್‌ಗಳಿಗೂ ಭಾರೀ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಅವುಗಳಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ಆಫರ್ ನೀಡಿರುತ್ತದೆ. ಹಾಗೆಯೇ ಸದ್ಯ ಅಮೆಜಾನ್‌ ಶಿಯೋಮಿ ಸಂಸ್ಥೆ ಹೊಸ ಶಿಯೋಮಿ 11T ಪ್ರೊ 5G ಸೇರಿದಂತೆ ಇತರೆ ಕೆಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೂ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶಿಯೋಮಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಮಿ 11X ಪ್ರೊ ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64 GB , 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Sale 2022: Best Discount On Xiaomi 11T Pro 5G, Mi 11X Pro 5G and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+