ಈ ಪವರ್‌ಫುಲ್ ಫೀಚರ್ಸ್‌ನ ಫೋನ್‌ಗಳಿಗೆ ಅಮೆಜಾನ್ ನೀಡುತ್ತಿದೆ ಭಾರೀ ರಿಯಾಯಿತಿ!
ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಒಂದಿಲ್ಲೊಂದು ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಮುಖ್ಯವಾಗಿ ಮೊಬೈಲ್ ಒಳಗೊಂಡಂತೆ ಇತರೆ ಸ್ಮಾರ್ಟ್ ಗ್ಯಾಡ್ಜೆಟ್ಸ್‌ಗಳಿಗೂ ದೊಡ್ಡ ರಿಯಾಯಿತಿ ನೀಡುತ್ತದೆ. ಇನ್ನು ಯಾವುದೇ ಮಾರಾಟ ಮೇಳ ಇಲ್ಲದ ಸಂದರ್ಭಗಳಲ್ಲೂ ಕೆಲವು ಆಯ್ದ ಮೊಬೈಲ್ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ಫೇಚರೇಟ್ ತಾಣ ಆಗಿ ಕಾಣಿಸಿಕೊಂಡಿದೆ.

ಇ ಕಾಮರ್ಸ್ ತಾಣವು ಮಾರಾಟ ಮೇಳದಲ್ಲಿ ಪ್ರಮುಖ ಕಂಪನಿಗಳ ಫೋನ್‌ಗಳಿಗೆ ಅಧಿಕ ಆಫರ್ ಲಭ್ಯ ಮಾಡುತ್ತದೆ. ಹಾಗೆಯೇ ಕಡಿಮೆ ಬೆಲೆಯ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಐಕ್ಯೂ iQOO ಮತ್ತು ಶಿಯೋಮಿ ಫೋನ್‌ಗಳಿಗೆ ಅತ್ಯುತ್ತಮ ಆಫರ್ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿರುವ ಐಕ್ಯೂ ಮತ್ತು ಶಿಯೋಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
iQOO Z3 ಸ್ಮಾರ್ಟ್‌ಫೋನ್
iQoo Z3 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.
iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಐಕ್ಯೂ Z5 ಸ್ಮಾರ್ಟ್‌ಫೋನ್
ಐಕ್ಯೂ Z5 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.
ಐಕ್ಯೂ 7 ಸ್ಮಾರ್ಟ್‌ಫೋನ್
ಐಕ್ಯೂ 7 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 91.4 ಶೇಕಡಾ ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಓರಿಜಿನ್OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಹಾಗೂ 12 GB RAM+ 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೆರಿಯೆಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ ಈ ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.


Click it and Unblock the Notifications