ಇತ್ತೀಚಿಗಿನ ಒಪ್ಪೋ ಮತ್ತು ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ವಿಶೇಷ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್, ಟ್ಯಾಬ್, ಲ್ಯಾಪ್‌ಟಾಪ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೂ ಬೊಂಬಾಟ್ ಕೊಡುಗೆ ನೀಡುತ್ತದೆ. ಹಾಗೆಯೇ ಯಾವುದೇ ಮಾರಾಟ ಮೇಳ ಇಲ್ಲದ ವೇಳಯೂ ಆಯ್ದ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ತಾಣ ಆಗಿ ಕಾಣಿಸಿಕೊಂಡಿದೆ.

ಇ ಕಾಮರ್ಸ್ ತಾಣವು ಮಾರಾಟ ಮೇಳದಲ್ಲಿ ಪ್ರಮುಖ ಕಂಪನಿಗಳ ಫೋನ್‌ಗಳಿಗೆ ಅಧಿಕ ಆಫರ್ ಲಭ್ಯ ಮಾಡುತ್ತದೆ. ಹಾಗೆಯೇ ಕಡಿಮೆ ಬೆಲೆಯ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಒಪ್ಪೋ ಮತ್ತು ರಿಯಲ್‌ಮಿ ಫೋನ್‌ಗಳಿಗೆ ಭಾರೀ ಕೊಡುಗೆ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ ಒಪ್ಪೋ ಮತ್ತು ರಿಯಲ್‌ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಒಪ್ಪೋ A15s ಸ್ಮಾರ್ಟ್‌ಫೋನ್
ಒಪ್ಪೋ A15s ಸ್ಮಾರ್ಟ್‌ಫೋನ್ 720 x 1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,230 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.
ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಇದು 4 GB + 64 GB ವೇರಿಯಂಟ್ ಮತ್ತು 6 GB + 128 GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12 ಎಂಪಿ ಸೆನ್ಸಾರ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.


Click it and Unblock the Notifications