ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಈ ಹೊಸ ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿ!

ಆನ್‌ಲೈನ್‌ ಗ್ರಾಹಕರನ್ನು ಸೆಳೆಯಲು ಇ ಕಾಮರ್ಸ್‌ ತಾಣಗಳು ಭರ್ಜರಿ ರಿಯಾಯಿತಿಗಳನ್ನು ಘೋಷಿಸುತ್ತವೆ. ಹೀಗಾಗಿ ಮೊಬೈಲ್‌ಗಳು ಸೇರಿದಂತೆ ಯಾವುದೇ ಟೆಕ್ ಡಿವೈಸ್‌ ಖರೀದಿ ಮಾಡುವ ಬಹುತೇಕ ಗ್ರಾಹಕರು ಇ ಕಾಮರ್ಸ್‌ಗಳತ್ತ ಮುಖ ಮಾಡುತ್ತಾರೆ. ಮುಖ್ಯವಾಗಿ ಅಮೆಜಾನ್ ಪ್ಲಾಟ್‌ಫಾರ್ಮ್ ಅನೇಕ ಆನ್‌ಲೈನ್ ಶಾಪಿಂಗ್ ಪ್ರಿಯರ ಫೇವರೇಟ್ ಪ್ಲಾಟ್‌ಫಾರ್ಮ್ ಎನಿಸಿದೆ. ಅಮೆಜಾನ್ ಮೊಬೈಲ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಲಭ್ಯ ಮಾಡುತ್ತದೆ.

ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಈ ಹೊಸ ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿ!

ಅಮೆಜಾನ್ ಇ ಕಾಮರ್ಸ್‌ ವಿಶೇಷ ಸೇಲ್‌ಗಳನ್ನು ಆಯೋಜಿಸುವ ಮೂಲಕ ಮೊಬೈಲ್‌ಗಳಿಗೆ ಕೊಡುಗೆ ನೀಡುತ್ತದೆ. ರಿಯಾಯಿತಿಯಲ್ಲಿ ಜನಪ್ರಿಯ ಮೊಬೈಲ್ ಸಂಸ್ಥೆಗಳ ಫೋನ್‌ಗಳು ಸೇರಿರುತ್ತವೆ. ಹಾಗೆಯೇ ನೂತನವಾಗಿ ಬಿಡುಗಡೆ ಆಗಿರುವ ಮೊಬೈಲ್‌ಗಳಿಗೂ ಆಕರ್ಷಕ ರಿಯಾಯಿತಿ ತಿಳಿಸುತ್ತದೆ. ಪ್ರಸ್ತುತ ಅಮೆಜಾನ್‌ನಲ್ಲಿ ಇತ್ತೀಚಿಗಷ್ಟೆ ಲಾಂಚ್ ಆದ ಕೆಲವು ನೂತನ ಮೊಬೈಲ್‌ಗಳಿಗೂ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದ, ಕೆಲವು ನೂತನ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90 Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X