Home
Deal of the day

ಅಮೆಜಾನ್‌ ತಾಣದಲ್ಲಿ ಟೆಕ್ನೋ ಮೊಬೈಲ್‌ಗಳಿಗೆ ಜಬರ್ದಸ್ತ್ ರಿಯಾಯಿತಿ!

ಮುಂಚೂಣಿಯ ಇ ಕಾಮರ್ಸ್‌ ತಾಣವಾಗಿ ಗುರುತಿಸಿಕೊಂಡಿರುವ ಅಮೆಜಾನ್, ಬೊಂಬಾಟ್ ಕೊಡುಗೆಗಳ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತ ಮುನ್ನಡೆದಿದೆ. ಮುಖ್ಯವಾಗಿ ವಿಶೇಷ ಮಾರಾಟ ಮೇಳಗಳನ್ನು ಆಯೋಜಿಸುವ ಮೂಲಕ ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ಮಾರುಕಟ್ಟೆ ಆಗಿ ಕಾಣಿಸಿಕೊಂಡಿದೆ. ಅದರಲ್ಲಿಯೂ ಮೊಬೈಲ್‌ ಗಳಿಗೆ ಅತ್ಯುತ್ತಮ ಕೊಡುಗೆ ನೀಡಿ ಮೊಬೈಲ್‌ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಅಮೆಜಾನ್‌ ತಾಣದಲ್ಲಿ ಟೆಕ್ನೋ ಮೊಬೈಲ್‌ಗಳಿಗೆ ಜಬರ್ದಸ್ತ್ ರಿಯಾಯಿತಿ!

ಅಮೆಜಾನ್‌ ತಾಣದಲ್ಲಿ ಸದ್ಯ ಮೊಬೈಲ್‌ ಮೊಬೈಲ್‌ ಗಳಿಗೆ ಗಮನ ಸೆಳೆವ ಕೊಡುಗೆ ನೀಡಿದೆ. ಆಯ್ದ ಕಂಪನಿಗಳ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡಿದೆ. ಆ ಪೈಕಿ ಬಜೆಟ್‌ ದರದ ಫೋನ್‌ಗಳ ಶ್ರೇಣಿ ಹೊಂದಿರುವ ಟೆಕ್ನೋ ಫೋನ್‌ಗಳಿಗೂ ರಿಯಾಯಿತಿ ಲಭ್ಯ ಮಾಡಿದೆ. ಈ ವೇಳೆ ಅಮೆಜಾನ್ ತಾಣವು ಕೆಲವು ಪ್ರಮುಖ ಕಂಪನಿಗಳ ಜನಪ್ರಿಯ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ ಲಭ್ಯ ಮಾಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಡಿಸ್ಕೌಂಟ್‌ ದರದಲ್ಲಿ ಗಮನ ಸೆಳೆದ ಟೆಕ್ನೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಗೋ ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ + ಡಾಟ್ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120 Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಎಐ ಡ್ಯುಯಲ್ ಹೈ-ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ 1080p ಟೈಮ್-ಲ್ಯಾಪ್ಸ್ ಫೋಟೋಗ್ರಫಿ, ಸ್ಮೈಲ್ ಕ್ಯಾಪ್ಚರ್, ಪನೋರಮಾ 120fps ಸ್ಲೋ ಮೋಷನ್ ಪ್ರಯೋಜನ ಸಿಗಲಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4 GB RAM + 64 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

English summary
Amazon Sale 2022: Best offers On These Top Tecno Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+