Home
Deal of the day

ಹೊಸ ಶಿಯೋಮಿ ಮೊಬೈಲ್‌ ಖರೀದಿಗೆ ಇದುವೇ ಅತ್ಯುತ್ತಮ ಸಮಯ!

ಏನಾದರೊಂದು ಅತ್ಯುತ್ತಮ ಆಫರ್‌ಗಳ ಮೂಲಕ ಗಮನ ಸೆಳೆದಿರುವ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್ ಪ್ರಮುಖವಾಗಿ ಮೊಬೈಲ್‌, ಲ್ಯಾಪ್‌ಟಾಪ್, ಸ್ಮಾರ್ಟ್‌ ಟಿವಿ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಡಿವೈಸ್‌ಗಳಿಗೆ ಬೊಂಬಾಟ್ ಡಿಸ್ಕೌಂಟ್‌ ನೀಡುತ್ತದೆ. ಈ ನಿಟ್ಟಿನಲ್ಲಿ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ಅತ್ಯುತ್ತಮ ತಾಣ ಎನಿಸಿದೆ. ಇನ್ನು ವಿಶೇಷ ಸೇಲ್ ಇಲ್ಲದ ವೇಳೆಯು ಆಫರ್ ಲಭ್ಯ.

ಹೊಸ ಶಿಯೋಮಿ ಮೊಬೈಲ್‌ ಖರೀದಿಗೆ ಇದುವೇ ಅತ್ಯುತ್ತಮ ಸಮಯ!

ಹೌದು, ಯಾವುದೇ ವಿಶೇಷ ಸೇಲ್ ಇಲ್ಲದೇ ವೇಳೆಯು ಅಮೆಜಾನ್‌ ತಾಣವು ಆಯ್ದ ಮೊಬೈಲ್‌ಗಳಿಗೆ ರಿಯಾಯಿತಿ ಲಭ್ಯ ಮಾಡಿರುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್‌ ಎಲ್ಲ ಮಾದರಿಯ ಮೊಬೈಲ್‌ಗಳಿಗೂ ದೊಡ್ಡ ರಿಯಾಯಿತಿ ಲಭ್ಯ ಮಾಡಿರುತ್ತದೆ. ಜೊತೆಗೆ ಹೊಸದಾಗಿ ಬಿಡುಗಡೆ ಆಗಿರುವ ಮೊಬೈಲ್‌ಗಳಿಗೆ ಆಫರ್ ನೀಡಿರುತ್ತದೆ. ಪ್ರಸ್ತುತ ಅಮೆಜಾನ್‌ ಶಿಯೋಮಿ ಕಂಪನಿಯ ಆಯ್ದ ಕೆಲವು ಮೊಬೈಲ್‌ಗಳಿಗೂ ಗಮನ ಸೆಳೆಯುವ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶಿಯೋಮಿ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64 GB, 6GB + 128 GB ಮತ್ತು 8GB RAM + 128 GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64 GB , 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128 GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Sale 2022: Best Offers On These Top Xiaomi Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+