Home
Deal of the day

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣವಾಗಿದೆ. ಅಮೆಜಾನ್‌ ತನ್ನ ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ವಿಶೇಷ ದಿನಗಳಲ್ಲಿ ಡಿಸ್ಕೌಂಟ್‌ ಮೇಳಗಳ ಮೂಲಕ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಸಹ ನೀಡುತ್ತದೆ. ಅದರಲ್ಲೂ ವಿಶೇಷವಾಗಿ ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚಿನ ಡಿಸ್ಕೌಂಟ್‌ ನೀಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇದಲ್ಲದೆ ವಿಶೇಷ ಸೇಲ್‌ಗಳು ಇಲ್ಲದ ಸಮಯದಲ್ಲೂ ಕೂಡ ಅಮೆಜಾನ್‌ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿ ನೀಡುವುದು ವಿಶೇಷವಾಗಿದೆ.

ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ!

ಹೌದು, ಅಮೆಜಾನ್‌ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ವಿಶೇಷ ಸೇಲ್‌ಗಳಿಲ್ಲದ ಸಮಯದಲ್ಲೂ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿ ನೀಡುತ್ತಾ ಬಂದಿದೆ. ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿವೆ. ಪ್ರಸ್ತುತ ನೀವು ಒಪ್ಪೋ ಕಂಪೆನಿಯ ಫೋನ್‌ಗಳನ್ನು ಖರೀದಿಸಲು ಬಯಸಿದರೆ ಅಮೆಜಾನ್‌ನಲ್ಲಿ ವಿಶೇಷ ಆಫರ್‌ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಅಮೆಜಾನ್‌ ತಾಣದಲ್ಲಿ ವಿಶೇಷ ಡಿಸ್ಕೌಂಟ್‌ ಪಡೆದುಕೊಂಡಿರುವ ಒಪ್ಪೋ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ A31
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯ ರಚನೆಯ ಅನುಪಾತವು 20:9 ಆಗಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅಂತರವು ಶೇ.89% ಆಗಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 6GB RAM+128GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೂ ಸಂಗ್ರಹ ಸಾಮರ್ಥ್ಯ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 4,230mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45 ಗಂಟೆಗಳ ಟಾಕ್‌ಟೈಮ್ ಬ್ಯಾಕ್‌ಅಪ್ ನೀಡುತ್ತದೆ.

ಒಪ್ಪೋ A74 5G
ಒಪ್ಪೋ A74 ಸ್ಮಾರ್ಟ್ ಫೋನ್ 2400x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.49 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 90.5%. ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ ಕಲರ್ ಓಎಸ್ 11.1 ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 8MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ F19s
ಒಪ್ಪೋ F19s ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 662 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 16ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A55
ಒಪ್ಪೋ A55 ಸ್ಮಾರ್ಟ್‌ಫೋನ್‌ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 89.2%. ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G35 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11.0 ಆಧಾರಿತ ಕಲರ್‌ ಓಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ F19 ಪ್ರೊ + 5G
ಒಪ್ಪೋ F19 ಪ್ರೊ + 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 2400x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 90.8% ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 800U ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌ ವೈಡ್ ಆಂಗಲ್ ಮ್ಯಾಕ್ರೋ ಲೆನ್ಸ್‌, ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಮ್ಯಾಕ್ರೋ ಮೊನೊ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ 50W ಫ್ಲ್ಯಾಶ್ ಚಾರ್ಜಿಂಗ್ ಬೆಂಬಲಿಸುವ 4310 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

English summary
Amazon sale 2022: Best Oppo smartphones from Amazon with massive price cut
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+