ಅಮೆಜಾನ್‌ನಲ್ಲಿ ಹೊಸ ಫೋನ್‌ಗಳಿಗೂ ಸಿಗಲಿದೆ ಜಬರ್ದಸ್ತ್ ರಿಯಾಯಿತಿ!
ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳ ಪೈಕಿ ಅಮೆಜಾನ್ ತಾಣವು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಈ ದೈತ್ಯ ಇ ಕಾಮರ್ಸ್ ತಾಣವು ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಸೆಳೆಯುತ್ತಲೇ ಮುನ್ನೆಡೆದಿದೆ. ಆ ಪೈಕಿ ಸ್ಪೆಷಲ್ ಸೇಲ್ ಮಾರಾಟಗಳ ಮೂಲಕ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಆಫರ್ ನೀಡಿ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಇನ್ನು ಯಾವುದೇ ವಿಶೇಷ ಮಾರಾಟ ಇಲ್ಲದ ಸಂದರ್ಭಗಳಲ್ಲಿ ಆಕರ್ಷಕ ರಿಯಾಯಿತಿ ಲಭ್ಯ.

ಅಮೆಜಾನ್ ತಾಣವು ಮಾರಾಟ ಮೇಳ ಗಳನ್ನು ಆಯೋಜಿಸುವ ಮೂಲಕ ಸ್ಮಾರ್ಟ್‌ಫೋನ್‌ಗಳಿಗೆ ಅತ್ಯುತ್ತಮ ಕೊಡುಗೆ ನೀಡುತ್ತದೆ. ಪ್ರಮುಖ ಮೊಬೈಲ್ ಸಂಸ್ಥೆಗಳ ಫೋನ್‌ಗಳು ಸೇರಿರುತ್ತವೆ. ಹಾಗೆಯೇ ಕೆಲವೊಮ್ಮೆ ನೂತನವಾಗಿ ಬಿಡುಗಡೆ ಆಗಿರುವ ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ತಿಳಿಸುತ್ತದೆ. ಪ್ರಸ್ತುತ ಅಮೆಜಾನ್ ತಾಣನಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಆದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡ ನೂತನವಾಗಿ ಬಿಡುಗಡೆ ಆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A16 ಸ್ಮಾರ್ಟ್‌ಫೋನ್
ಒಪ್ಪೋ A16 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD + LCD ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್, 60Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ. ಹಾಗೆಯೇ 480 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM ಮತ್ತು 64 GB ಇಂಟರ್‌ನಲ್ ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.
ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್ ರೇಟ್ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆ ಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.


Click it and Unblock the Notifications