Home
Deal of the day

ಸ್ಯಾಮ್‌ಸಂಗ್ ಮತ್ತು ಒನ್‌ಪ್ಲಸ್‌ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ!

ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ವಿಶೇಷ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್, ಮೊಬೈಲ್, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಆಕರ್ಷಕ ಕೊಡುಗೆ ನೀಡುತ್ತದೆ. ಇನ್ನು ಆಫರ್ ಇಲ್ಲದ ವೇಳೆಯು ಅತ್ಯುತ್ತಮ ರಿಯಾಯಿತಿ ಲಭ್ಯ ಮಾಡಿರುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ತಾಣ ಆಗಿ ಕಾಣಿಸಿಕೊಂಡಿದೆ.

ಸ್ಯಾಮ್‌ಸಂಗ್ ಮತ್ತು ಒನ್‌ಪ್ಲಸ್‌ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ!

ಅಮೆಜಾನ್ ತಾಣವು ವಿಶೇಷ ಮಾರಾಟ ಮೇಳ ಆಯೋಜಿಸುವ ಮೂಲಕ ಪ್ರಮುಖ ಕಂಪನಿಗಳ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ ಲಭ್ಯ ಮಾಡುತ್ತದೆ. ಹಾಗೆಯೇ ಬಜೆಟ್‌ ದರದ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್‌ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಸ್ಯಾಮ್‌ಸಂಗ್ ಮತ್ತು ಒನ್‌ಪ್ಲಸ್‌ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ ಸ್ಯಾಮ್‌ಸಂಗ್ ಮತ್ತು ಒನ್‌ಪ್ಲಸ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB, 8GB RAM ಮತ್ತು 128 GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

English summary
Amazon Sale 2022: Big Discount On The Samsung And Oneplus Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+