Home
Deal of the day

ಅಮೆಜಾನ್‌ ತಾಣದಲ್ಲಿ 48 ಮೆಗಾಪಿಕ್ಸಲ್ ಕ್ಯಾಮೆರಾ ಫೋನ್‌ಗಳಿಗೆ ಬಿಗ್ ಆಫರ್!

ಅಮೆಜಾನ್ ಪ್ಲಾಟ್‌ಫಾರ್ಮ್ ಆಕರ್ಷಕ ಸೇಲ್‌ಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಅಮೆಜಾನ್‌ ತಾಣವು ಮುಖ್ಯವಾಗಿ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಉತ್ಪನ್ನಗಳಿಗೆ ಬೊಂಬಾಟ್ ಡಿಸ್ಕೌಂಟ್‌ ನೀಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರಿಗೆ ಅಮೆಜಾನ್ ಫೇವರೇಟ್ ಶಾಪಿಂಗ್ ತಾಣ ಎನಿಸಿದೆ. ಜನಪ್ರಿಯ ಬ್ರ್ಯಾಂಡ್‌ಗಳ ನೂತನ ಫೋನ್‌ಗಳಿಗೂ ಭಾರಿ ಆಫರ್‌ ನೀಡಿ, ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಅಮೆಜಾನ್‌ ತಾಣದಲ್ಲಿ 48 ಮೆಗಾಪಿಕ್ಸಲ್ ಕ್ಯಾಮೆರಾ ಫೋನ್‌ಗಳಿಗೆ ಬಿಗ್ ಆಫರ್!

ಇನ್ನು ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ಡಿಸ್ಕೌಂಟ್ ನೀಡುತ್ತದೆ. ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾಡೆಲ್‌ಗಳ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಅತ್ಯುತ್ತಮ ಆಫರ್ ಲಭ್ಯ ಮಾಡಿದೆ. ಹಾಗೆಯೇ ಅಮೆಜಾನ್ 48 ಮೆಗಾ ಪಿಕ್ಸಲ್ ಸೆನ್ಸಾರ್‌ನ ಫೋನ್‌ಗಳಿಗೂ ಬೆಸ್ಟ್‌ ರಿಯಾಯಿತಿ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ 48 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ವನ್ನು ಹೊಂದಿದ್ದು, ಆಂಡ್ರಾಯ್ಡ್ 11 ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ ವಿ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ 9 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ 9 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

English summary
Amazon Sale 2022: Big Discount On These 48MP Camera Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+