ಅಮೆಜಾನ್‌ನಲ್ಲಿ ಈ ಕಡಿಮೆ ದರದ ಫೋನ್‌ಗಳಿಗೆ ಈಗ ಅತ್ಯುತ್ತಮ ಆಫರ್!

ಪ್ರಮುಖ ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಏನಾದರೊಂದು ಬೊಂಬಾಟ್ ಸೇಲ್‌ ಆಯೋಜಿಸುತ್ತಲೇ ಮುನ್ನಡೆದಿದೆ. ಬೊಂಬಾಟ್ ರಿಯಾಯಿತಿ ಆಫರ್‌ಗಳನ್ನು ನೀಡುತ್ತ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಖ್ಯವಾಗಿ ಸ್ಮಾರ್ಟ್‌ ಸಾಧನಗಳಿಗೆ ಆಕರ್ಷಕ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಈ ಹಬ್ಬದ ಸೇಲ್‌ ಇಲ್ಲದೇ ವೇಳೆಯು ಕೆಲವು ಆಯ್ದ ಮೊಬೈಲ್‌ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ಗಳನ್ನು ತಿಳಿಸಿದೆ.

ಅಮೆಜಾನ್‌ನಲ್ಲಿ ಈ ಕಡಿಮೆ ದರದ ಫೋನ್‌ಗಳಿಗೆ ಈಗ ಅತ್ಯುತ್ತಮ ಆಫರ್!

ಅಮೆಜಾನ್ ತಾಣವು ಕಡಿಮೆ ಬೆಲೆಯ ಫೋನ್‌ಗಳು ಸೇರಿದಂತೆ ಹೈ ಎಂಡ್ ಬೆಲೆಯ ಫೋನ್‌ಗಳಿಗೂ ಭರ್ಜರಿ ಆಫರ್‌ಗಳು ನೀಡುತ್ತದೆ. ಹಾಗೆಯೇ ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ಬಿಗ್ ಡಿಸ್ಕೌಂಟ್‌ ಅನ್ನು ನೀಡುತ್ತದೆ. ಸದ್ಯ ಅಮೆಜಾನ್‌ ನಲ್ಲಿ ಕೆಲವು ಕಡಿಮೆ ಬೆಲೆಯ ಫೋನ್‌ಗಳು ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಕೊಡುಗೆ ಪಡೆದ ಅಗ್ಗದ ಬೆಲೆಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆ ಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 2GB RAM / 3 GB RAM ಮತ್ತು 32 GB ಆಂತರೀಕ ಸಂಗ್ರಹದ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಹಿಂಬದಿಯಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್ 5,000 mAh ಬ್ಯಾಟರಿಯನ್ನ ಬ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಮೈಕ್ರೋ ಸ್ಲಿಟ್ ಫ್ಲ್ಯಾಶ್‌ಲೈಟ್ ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌

ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X