Home
Deal of the day

ಜಸ್ಟ್‌ 10,000ರೂ. ಒಳಗಿನ ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌!

ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಮುನ್ನಡೆದಿದೆ. ಭಾರೀ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಖ್ಯವಾಗಿ ಸ್ಮಾರ್ಟ್‌ ಗ್ಯಾಡ್ಜೆಟ್ಸ್‌ಗಳಿಗೆ ಸ್ಪೆಷಲ್ ರಿಯಾಯಿತಿ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಈ ಹಬ್ಬದ ಸೇಲ್‌ ಇಲ್ಲದೇ ವೇಳೆಯು ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ರಿಯಾಯಿತಿಗಳನ್ನು ತಿಳಿಸಿದೆ.

ಜಸ್ಟ್‌ 10,000ರೂ. ಒಳಗಿನ ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌!

ಹೌದು, ಅಮೆಜಾನ್ ತಾಣವು ಕಡಿಮೆ ಬೆಲೆಯ ಫೋನ್‌ಗಳು ಸೇರಿದಂತೆ ದುಬಾರಿ ಬೆಲೆಯ ಫೋನ್‌ಗಳಿಗೂ ಭರ್ಜರಿ ಆಫರ್‌ಗಳು ನೀಡುತ್ತದೆ. ಹಾಗೆಯೇ ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಸದ್ಯ ಅಮೆಜಾನ್‌ ನಲ್ಲಿ ಕೆಲವು ಅಗ್ಗದ ಫೋನ್‌ಗಳು ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯವಾಗಲಿವೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬೆಸ್ಟ್‌ ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 2GB RAM / 3 GB RAM ಮತ್ತು 32 GB ಆಂತರೀಕ ಸಂಗ್ರಹದ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಹಿಂಬದಿಯಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್ 5,000 mAh ಬ್ಯಾಟರಿಯನ್ನ ಬ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಮೈಕ್ರೋ ಸ್ಲಿಟ್ ಫ್ಲ್ಯಾಶ್‌ಲೈಟ್ ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆ ಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64 GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3 GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Sale 2022: Big Discount On These Under Rs 10,000 Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+