ಅಗ್ಗದ ರೆಡ್ಮಿ ಮೊಬೈಲ್‌ಗಳು ಈಗ ಆಕರ್ಷಕ ಬೆಲೆಯಲ್ಲಿ ಲಭ್ಯ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಫೇವರೇಟ್ ಶಾಪಿಂಗ್ ಅಡ್ಡಾ ಎನಿಸಿದೆ. ಜನಪ್ರಿಯ ಇ ಕಾಮರ್ಸ್ ದೊಡ್ಡಣ್ಣ ಎಂದೇ ಬಿಂಬಿತವಾಗಿರುವ ಅಮೆಜಾನ್ ಒಂದಿಲ್ಲೊಂದು ಬೊಂಬಾಟ್ ಸೇಲ್ ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ. ಕೆಲವೊಮ್ಮೆ ಯಾವುದೇ ವಿಶೇಷ ಸೇಲ್ ಇಲ್ಲದ ವೇಳೆಯು ಸಹ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಹೌದು, ಅಮೆಜಾನ್ ತಾಣವು ಅಗ್ಗದ ಫೋನ್‌ಗಳಿಂದ ಹೈ ಎಂಡ್ ಮಾದರಿಯ ಫೋನ್‌ಗಳವರೆಗೂ ಎಲ್ಲ ಮಾದರಿಯ ಫೋನ್‌ಗಳಿಗೆ ರಿಯಾಯಿತಿ ಲಭ್ಯ ಮಾಡಿದೆ. ಅದರಲ್ಲಿಯೂ ಮಾರಾಟದಲ್ಲಿ ಅಗ್ಗದ ಫೋನ್‌ಗಳು ಇನ್ನಷ್ಟು ಕಡಿಮೆ ದರದಲ್ಲಿ ಲಭ್ಯ ಆಗುತ್ತವೆ. ಸದ್ಯ ಶಿಯೋಮಿ ಸಂಸ್ಥೆಯು ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ತಿಳಿಸಿದೆ. ಹೀಗಾಗಿ ಶಿಯೋಮಿ ಫೋನ್‌ಗಳು ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಅಮೆಜಾನ್‌ನಲ್ಲಿ ರಿಯಾಯಿತಿ ಪಡೆದ ಕೆಲವು ಆಯ್ದ ಜನಪ್ರಿಯ ಶಿಯೋಮಿ ರೆಡ್ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್
ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 13 ಮೆಗಾ ಪಿಕ್ಸೆಲ್ ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ರೆಡ್ಮಿ 9 ಪ್ರೈಮ್ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ 5.0, ವೈ-ಫೈ ಡೈರೆಕ್ಟ್, ಎಫ್‌ಎಂ ರೇಡಿಯೋ ಅನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.


Click it and Unblock the Notifications