ಫ್ಲ್ಯಾಗ್‌ಶಿಪ್ ಮಾದರಿಯ ಕ್ಯಾಮೆರಾ ಇರುವ ಈ ದೈತ್ಯ ಫೋನ್ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!
ಇ ಕಾಮರ್ಸ್ ದೈತ್ಯ ಅಮೆಜಾನ್ ಬಿಗ್ ದೀಪಾವಳಿ ಹಬ್ಬದ ಪ್ರಯುಕ್ತ ಬೊಂಬಾಟ್ ಡಿಸ್ಕೌಂಟ್‌ಗಳನ್ನು ಘೋಷಣೆ ಮಾಡಿದೆ. ಆ ಪೈಕಿ ಐಕ್ಯೂ ಸಂಸ್ಥೆಯು ಐಕ್ಯೂ ನಿಯೋ 9 ಪ್ರೊ 5G ಮೊಬೈಲ್ ಸಖತ್ ಡಿಸ್ಕೌಂಟ್ ದರದಲ್ಲಿ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಐಕ್ಯೂ ನಿಯೋ 9 ಪ್ರೊ 5G (iQOO Neo9 Pro 5G) ಫೋನ್ ಶೇ. 14% ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB + 256 GB ವೇರಿಯಂಟ್ 35,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಮೊಬೈಲ್ ಅನ್ನು ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ.

ಐಕ್ಯೂ ಸಂಸ್ಥೆಯ ಐಕ್ಯೂ ನಿಯೋ 9 ಪ್ರೊ 5G (iQOO Neo9 Pro 5G) ಸ್ಮಾರ್ಟ್‌ಫೋನ್ 8GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳನ್ನು ಪಡೆದಿದೆ. ಇದರ ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಹಾಗಾದರೇ ಐಕ್ಯೂ ನಿಯೋ 9 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಐಕ್ಯೂ ನಿಯೋ 9 ಪ್ರೊ 5G - ಫೀಚರ್ಸ್
ಐಕ್ಯೂ ನಿಯೋ 9 ಪ್ರೊ 5G ಫೋನ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇಯು 1400 ನಿಟ್ಸ್ ಬ್ರೈಟ್‌ನೆಸ್ ಲೆವೆಲ್ ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದೆ.
ಐಕ್ಯೂ ನಿಯೋ 9 ಪ್ರೊ 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವ ಆಯ್ಕೆ ಕೂಡ ಇದೆ.
ಐಕ್ಯೂ ನಿಯೋ 9 ಪ್ರೊ 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್ ಸಪೋರ್ಟ್ ಪಡೆದಿದೆ. ಇದರ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಅನ್ನು ಪಡೆದಿದೆ. ಹಾಗೆಯೇ ಇನ್ನು ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಐಕ್ಯೂ ನಿಯೋ 9 ಪ್ರೊ 5G ಫೋನ್ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಫ್ಲ್ಯಾಶ್ ಚಾರ್ಜ್‌ನ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications







