ಸ್ಯಾಮ್‌ಸಂಗ್ ಫೋನ್‌ಗಳಿಗೆ ಇದಕ್ಕಿಂತ ಆಕರ್ಷಕ ಕೊಡುಗೆ ಮತ್ತೆ ಸಿಗಲ್ಲ!
ಪ್ರಸ್ತುತ ಇ ಕಾಮರ್ಸ್ ವೆಬ್‌ಸೈಟ್ ಗಳು ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆಯುವಲ್ಲಿ ಭರ್ಜರಿ ಕೊಡುಗೆ ನೀಡುತ್ತವೆ. ಆ ಪೈಕಿ ಇ ಕಾಮರ್ಸ್ ದೈತ್ಯ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಬಹುತೇಕ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ.

ಅಮೆಜಾನ್ ಪ್ಲಾಟ್‌ಫಾರ್ಮ್ ಕೆಲವೊಮ್ಮೆ ಯಾವುದೇ ಸ್ಪೆಷಲ್ ಸೇಲ್ ಇಲ್ಲದಾಗಲೂ ಅಗ್ಗದ ಬೆಲೆಯ ಫೋನ್‌ಗಳಿಂದ, ಹೈ ಎಂಡ್ ಬೆಲೆಯ ಫೋನ್‌ಗಳಿಗೂ ಭಾರೀ ಕೊಡುಗೆ ಲಭ್ಯ ಮಾಡಿರುತ್ತದೆ. ಪ್ರಮುಖ ಸಂಸ್ಥೆಗಳ ಫೋನ್‌ಗಳು ಸೇರಿದಂತೆ, ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ಕೊಡುಗೆಯಲ್ಲಿ ನೀಡಿರುತ್ತದೆ. ಹಾಗೆಯೇ ಸದ್ಯ ಅಮೆಜಾನ್ ಸ್ಯಾಮ್‌ಸಂಗ್ ಕಂಪನಿಯ ಕೆಲವು ಸ್ಮಾರ್ಟ್‌ಫೋನ್‌ಗಳಿಗೂ ಭಾರೀ ರಿಯಾಯಿತಿ ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಸ್ಯಾಮ್‌ಸಂಗ್ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM + 64GB 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಒಂದು UI 3 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್
ಗ್ಯಾಲ್ಯಾಕ್ಸಿ A21s ಸ್ಮಾರ್ಟ್‌ಫೋನ್ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದ್ದು, 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾಕೋರ್ Exynos 7904 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಮೂರು ವೇರಿಯಂಟ್ ಮಾದರಿಗಳಿರಲಿದ್ದು, ಅವುಗಳು ಕ್ರಮವಾಗಿ 3GB + 32GB, 4GB + 64GB, ಮತ್ತು 6GB + 64GB ಸಾಮರ್ಥ್ಯವನ್ನು ಒಳಗೊಂಡಿವೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ಮುಂಭಾಗದಲ್ಲಿ 13 ಮೆಗಾಪಿಕ್ಸಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಈ ಫೋನ್ 5,000 mAh ಸಾಮರ್ಥ್ಯದ ದೀರ್ಘಕಾಲದ ಬ್ಯಾಟರಿಯನ್ನು ಒದಗಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.


Click it and Unblock the Notifications