ಅಮೆಜಾನ್‌ನಲ್ಲಿ ಅಗ್ಗದ ಟೆಕ್ನೋ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!
ಪ್ರಸ್ತುತ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳು ಗ್ರಾಹಕರನ್ನು ಸೆಳೆಯುವಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಆ ಪೈಕಿ ಅಮೆಜಾನ್ ಪ್ಲಾಟ್‌ಫಾರ್ಮ್ ಇ ಕಾಮರ್ಸ್ ದೈತ್ಯ ಸಂಸ್ಥೆ ಆಗಿ ಗುರುತಿಸಿಕೊಂಡಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ಅಡ್ಡಾ ಆಗಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಹಾಗೆಯೇ ವಿಶೇಷ ಸೇಲ್ ಹೊರತು ಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಅಮೆಜಾನ್ ತಾಣದಲ್ಲಿ ಕಡಿಮೆ ಬೆಲೆಯ ಫೋನ್‌ಗಳಿಂದ ಆಯ್ಕೆಯಿಂದ, ದುಬಾರಿ ಬೆಲೆಯ ಫೋನ್‌ಗಳಿಗೂ ಆಕರ್ಷಕ ಕೊಡುಗೆ ಸಿಗುತ್ತದೆ. ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಸೇರಿದಂತೆ, ಇತ್ತೀಚಿಗೆ ಬಿಡುಗಡೆ ಆಗಿರುವ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೂ ಬೊಂಬಾಟ್ ರಿಯಾಯಿತಿ ಇರುತ್ತದೆ. ಅಮೆಜಾನ್‌ನಲ್ಲಿ ಟೆಕ್ನೋ ಕಂಪನಿಯ ಆಯ್ದ ಫೋನ್‌ಗಳಿಗೂ ಆಕರ್ಷಕ ಡಿಸ್ಕೌಂಟ್ ಲಭ್ಯ ಇದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಬೆಸ್ಟ್ ಡಿಸ್ಕೌಂಟ್ ಪಡೆದ ಟೆಕ್ನೋ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ ಗೋ 2021 ಫೋನ್
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಟೆಕ್ನೋ ಸ್ಮಾರ್ಕ್ 7 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್ 6.52 ಹೆಚ್‌ಡಿ + ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಹಿಯೋಸ್ 7.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್
ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications