ಅಮೆಜಾನ್‌ನಲ್ಲಿ ಈ ಜನಪ್ರಿಯ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ಅಚ್ಚು ಮೆಚ್ಚಿನ ತಾಣ ಎನಿಸಿಕೊಂಡಿದೆ. ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ವಿಶೇಷ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತ ಮುನ್ನಡೆದಿದೆ. ಹಬ್ಬದ ವಿಶೇಷ ಮಾರಾಟ ಇಲ್ಲದೆ ವೇಳೆಯೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಹೌದು, ಅಮೆಜಾನ್ ಪ್ರಮುಖ ಕಂಪನಿಗಳ ಜನಪ್ರಿಯ ಸ್ಮಾರ್ಟ್‌ಫೋನ್ ಗಳಿಗೆ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಕೊಡುಗೆಗಳನ್ನು ನೀಡುತ್ತದೆ. ಅಗ್ಗದ ಬೆಲೆಯ ಫೋನ್‌ಗಳಿಂದ, ಹೈ ಎಂಡ್ ಫೋನ್‌ಗಳಿಗೂ ಸಹ ಕೊಡುಗೆ ತಿಳಿಸುತ್ತದೆ. ಸದ್ಯ ಅಮೆಜಾನ್‌ನಲ್ಲಿ ಕೆಲವು ಜನಪ್ರಿಯ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64GB ಮತ್ತು 6 GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
iQOO Z3 5G ಸ್ಮಾರ್ಟ್‌ಫೋನ್
iQOO Z3 5G ಸ್ಮಾರ್ಟ್‌ಫೋನ್ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್+ ಎಲ್‌ಸಿಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128 GB ಹಾಗೂ 8GB RAM ಮತ್ತು 256 GB ಇಂಟರ್‌ನಲ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್ 6.52 ಹೆಚ್‌ಡಿ + ಡಾಟ್ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಟೆಕ್ನೋ ಸ್ಪಾರ್ಕ್ ಗೋ 2021 ಫೋನ್
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.


Click it and Unblock the Notifications