Home
Deal of the day

ಅಮೆಜಾನ್‌ನಲ್ಲಿ ಅಲೆಕ್ಸಾ ಸೌಲಭ್ಯದ ಈ ಫೋನ್‌ಗಳಿಗೆ ಭಾರೀ ರಿಯಾಯಿತಿ!

ಇ ಕಾಮರ್ಸ್‌ ವಲಯದಲ್ಲಿ ಅಮೆಜಾನ್ ಸಂಸ್ಥೆಯು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ತಾಣವು ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿ ಗುರುತಿಸಿಕೊಂಡಿದೆ. ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ವಿಶೇಷ ಕೊಡುಗೆ ನೀಡಿ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತಲ್ಲೇ ಸಾಗಿದೆ. ಕೆಲವೊಮ್ಮೆ ವಿಶೇಷ ಸೇಲ್, ಯಾವುದೇ ವಿಶೇಷ ಮಾರಾಟ ಇಲ್ಲದಿದ್ದಾಗಲೂ ಆಯ್ದ ಫೋನ್‌ಗಳಿಗೆ ಬೊಂಬಾಟ್ ರಿಯಾಯಿತಿ ಲಭ್ಯ ಮಾಡುತ್ತದೆ.

ಅಮೆಜಾನ್‌ನಲ್ಲಿ ಅಲೆಕ್ಸಾ ಸೌಲಭ್ಯದ ಈ ಫೋನ್‌ಗಳಿಗೆ ಭಾರೀ ರಿಯಾಯಿತಿ!

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಬಜೆಟ್‌ ದರದ ಫೋನ್‌ಗಳಿಂದ ಹಿಡಿದು ಹೈ ಎಂಡ್ ಮಾಡೆಲ್ ಫೋನ್‌ಗಳ ವರೆಗೂ ಆಕರ್ಷಕ ರಿಯಾಯಿತಿ ನೀಡುತ್ತದೆ. ಹೊಸದಾಗಿ ಬಿಡುಗಡೆ ಆಗಿರುವ ಹಾಗೂ ಜನಪ್ರಿಯ ಫೀಚರ್ಸ್‌ಗಳನ್ನು ಹೊಂದಿರುವ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಹಾಗೆಯೇ ಬಿಲ್ಟ್‌ ಇನ್ ಅಲೆಕ್ಸಾ ಆಯ್ಕೆಯ ಜನಪ್ರಿಯ ಬ್ರ್ಯಾಂಡ್‌ಗಳ ಫೋನ್‌ಗಳಿಗೂ ಈಗ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ ಇರುವ ಬಿಲ್ಟ್‌ ಇನ್ ಅಲೆಕ್ಸಾ ಆಯ್ಕೆಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್ CE 5G
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌
ಶಿಯೋಮಿ ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10ಒಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB, 6GB RAM ಮತ್ತು 128GB, ಹಾಗೂ 8GB RAM ಮತ್ತು 128GB ಆಂತರಿಕ ಸಂಗ್ರಹಣ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆ ಯನ್ನ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲ ವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಈ ಫೋನ್ ಒಳಗೊಂಡಿದೆ.

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದ್ದು, 6.55-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯ ವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಹೊಂದಿದೆ. ಹಾಗೆಯೇ ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10S ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Sale: Best Discounts On Alexa Built-In Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+