ರೆಡ್ಮಿ ಮತ್ತು ಟೆಕ್ನೋ ಕಂಪನಿಯ ಸ್ಮಾರ್ಟ್‌ಗಳಿಗೆ ಬೊಂಬಾಟ್ ಕೊಡುಗೆ!
ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿ ಕಾಣಿಸಿಕೊಂಡಿದೆ. ಜನಪ್ರಿಯ ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಹಾಗೆಯೇ ವಿಶೇಷ ಸೇಲ್ ಹೊರತು ಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಹೌದು, ಅಮೆಜಾನ್‌ನಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೆ ಬಿಗ್ ಕೊಡುಗೆ ಲಭ್ಯ. ಇತ್ತೀಚಿಗೆ ಬಿಡುಗಡೆ ಆಗಿರುವ ಜನಪ್ರಿಯ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಇರುತ್ತದೆ. ಹಾಗೆಯೇ ರೆಡ್ಮಿ ಹಾಗೂ ಟೆಕ್ನೋ ಕಂಪನಿಯ ಆಯ್ದ ಫೋನ್‌ಗಳಿಗೂ ಬಿಗ್ ರಿಯಾಯಿತಿ ಲಭ್ಯ ಇದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದ ರೆಡ್ಮಿ ಮತ್ತು ಟೆಕ್ನೋ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಮಾರ್ಕ್ 7 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ ಗೋ 2021 ಫೋನ್
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್ 6.52 ಹೆಚ್‌ಡಿ+ ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 16 ಮೆಗಾ ಪಿಕ್ಸೆಲ್ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್ ನೈಟ್, ಗ್ಲಾಸಿಲ್ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications