ಸ್ಯಾಮ್‌ಸಂಗ್ ಮತ್ತು ರೆಡ್ಮಿ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ಗಳು ಆಫರ್‌ನಲ್ಲಿ ಲಭ್ಯ!
ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿ ಎಂದೇನಿಸಿಕೊಂಡಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಭರ್ಜರಿ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಹಾಗೆಯೇ ವಿಶೇಷ ಸೇಲ್ ಹೊರತು ಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಹೌದು, ಅಮೆಜಾನ್ ನಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೆ ಬಿಗ್ ಕೊಡುಗೆ ಲಭ್ಯ. ಇತ್ತೀಚಿಗೆ ಬಿಡುಗಡೆ ಆಗಿರುವ ಜನಪ್ರಿಯ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಇರುತ್ತದೆ. ಹಾಗೆಯೇ ಸ್ಯಾಮ್‌ಸಂಗ್ ಹಾಗೂ ರೆಡ್ಮಿ ಕಂಪನಿಯ ಆಯ್ದ ಫೋನ್‌ಗಳಿಗೂ ಆಕರ್ಷಕ ಡಿಸ್ಕೌಂಟ್ ಲಭ್ಯ ಇದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಬೆಸ್ಟ್ ಡಿಸ್ಕೌಂಟ್ ಪಡೆದ ಸ್ಯಾಮ್‌ಸಂಗ್ ಹಾಗೂ ರೆಡ್ಮಿ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ ನೋಟ್ 10S ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್ ನೈಟ್, ಗ್ಲಾಸಿಲ್ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.


Click it and Unblock the Notifications