ಈ ಕೊಡುಗೆ ಗಮನಿಸಿ!..IQOO ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!
ಜನಪ್ರಿಯ ಅಮೆಜಾನ್ ಏನಾದರೊಂದು ಕೊಡುಗೆಯ ಮೂಲಕ ಆನ್‌ಲೈನ್ ಗ್ರಾಹಕರನ್ನು ತನ್ನತ್ತ ಸೆಳೆಯುತ್ತದೆ. ಈ ದೈತ್ಯ ಇ ಕಾಮರ್ಸ್ ಮುಖ್ಯವಾಗಿ ಗ್ಯಾಡ್ಜೆಟ್ಸ್ ಗಳಿಗೆ ಅದರಲ್ಲಿಯೂ ಮೊಬೈಲ್‌ಗಳಿಗೆ ಹೆಚ್ಚಿನ ಕೊಡುಗೆ ನೀಡುತ್ತದೆ. ಹಬ್ಬದ ದಿನಗಳಲ್ಲಿ ಸ್ಮಾರ್ಟ್‌ಫೋನ್, ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್ ಗಳಿಗೆ ಭಾರೀ ಕೊಡುಗೆ ನೀಡುತ್ತದೆ. ಇನ್ನು ಆಫರ್ ಇಲ್ಲದ ವೇಳೆಯು ಫೋನ್‌ಗಳಿಗೆ ರಿಯಾಯಿತಿ ಲಭ್ಯ ಮಾಡಿರುತ್ತದೆ.

ಅಮೆಜಾನ್ ಇ ಕಾಮರ್ಸ್ ವಿಶೇಷ ಮಾರಾಟ ಮೇಳ ಆಯೋಜಿಸುವ ಮೂಲಕ ಪ್ರಮುಖ ಸಂಸ್ಥೆಗಳ ಫೋನ್‌ಗಳಿಗೆ ರಿಯಾಯಿತಿ ಲಭ್ಯ ಮಾಡುತ್ತದೆ. ಹಾಗೆಯೇ ಎಲ್ಲ ಮಾದರಿಯ ಫೋನ್‌ಗಳಿಗೂ ಆಫರ್ ಲಭ್ಯ ಮಾಡಿತ್ತದೆ. ಜೊತೆಗೆ ನೂತನವಾಗಿ ಲಾಂಚ್ ಆಗಿರುವ ಫೋನ್ ಗಳಿಗೂ ಬೊಂಬಾಟ್ ಕೊಡುಗೆ ಲಭ್ಯ ಮಾಡುತ್ತದೆ. ಸದ್ಯ ಐಕ್ಯೂ - IQOO ಸಂಸ್ಥೆಯ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ IQOO ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ Z5 ಸ್ಮಾರ್ಟ್‌ಫೋನ್
ಐಕ್ಯೂ Z5 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.
iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 128 GB ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
iQOO Z3 ಸ್ಮಾರ್ಟ್‌ಫೋನ್
iQOO Z3 ಫೋನ್ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿ ಯನ್ನು ಬೆಂಬಲಿಸಲಿದೆ.
ಐಕ್ಯೂ 7 ಸ್ಮಾರ್ಟ್‌ಫೋನ್
ಐಕ್ಯೂ 7 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 91.4 ಶೇಕಡಾ ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಓರಿಜಿನ್OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಹಾಗೂ 12 GB RAM+ 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೆರಿಯೆಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ ಈ ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಐಕ್ಯೂ 9 ಪ್ರೊ 5G ಸ್ಮಾರ್ಟ್‌ಫೋನ್
ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ 3,200 x 1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಕ್ವಾಡ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಿದೆ.


Click it and Unblock the Notifications