ಸದ್ಯ ಅತ್ಯುತ್ತಮ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಫೋನ್‌ಗಳ ಮಾಹಿತಿ ಇಲ್ಲಿದೆ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಏನಾದರೊಂದು ಆಫರ್ ಮೂಲಕ ಗ್ರಾಹಕರ ಗಮನ ಸೆಳೆಯುತ್ತ ಮುನ್ನಡೆದಿದೆ. ಇತ್ತೀಚಿಗಷ್ಟೆ ಮುಕ್ತಾಯವಾದ ಅಮೆಜಾನ್ ದೀಪಾವಳಿ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಅಧಿಕ ರಿಯಾಯಿತಿ ಲಭ್ಯ ಮಾಡಿತ್ತು. ಇನ್ನು ಕೆಲವೊಮ್ಮೆ ಸ್ಪೆಷಲ್ ಸೇಲ್ ಇಲ್ಲದ ಸಂದರ್ಭದಲ್ಲಿಯೂ ಆಯ್ದ ಫೋನ್‌ಗಳಿಗೆ ಕೊಡುಗೆ ನೀಡಿರುತ್ತೆ. ಸದ್ಯ ಹೊಸ ಫೋನ್‌ಗೆ ಅಪ್‌ಗ್ರೇಡ್ ಆಗುವ ಗ್ರಾಹಕರಿಗಾಗಿ ಕೆಲವೊಂದು ಜನಪ್ರಿಯ ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್ ತಿಳಿಸಿದೆ.

ಹೌದು, ಅಮೆಜಾನ್ ತಾಣವು ಸ್ಮಾರ್ಟ್‌ಫೋನ್ ಅಪ್‌ಗ್ರೇಡ್ ಸೇಲ್ ನಲ್ಲಿ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ನೀಡಿದೆ. ಈ ಕೊಡುಗೆಯಲ್ಲಿ ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೆಂಜ್ ಆಫರ್ ಸಹ ನೀಡಿದೆ. ಇದರೊಂದಿಗೆ ಸಿಟಿ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ತಿಳಿಸಿದೆ. ಹಾಗಾದರೇ ಸದ್ಯ ಅಮೆಜಾನ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A74 5G ಸ್ಮಾರ್ಟ್‌ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ ಈ ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆ ಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್ ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಈ ಫೋನ್ ಒಳಗೊಂಡಿದೆ.
ಮಿ 11X 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications