Home
Deal of the day

ಅಮೆಜಾನ್‌ನಲ್ಲಿ ಕ್ರಿಸ್‌ಮಸ್‌ ಅಂಗವಾಗಿ ವಿವೋ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!

ಇ-ಕಾಮರ್ಸ್‌ ದೈತ್ಯ ಅಮೆಜಾನ್ ಗ್ರಾಹಕರನ್ನು ಸೆಳೆಯಲು ಏನಾದರೊಂದು ಕೊಡುಗೆ ನೀಡುತ್ತಲೇ ಸಾಗಿದೆ. ಅದರಲ್ಲಿಯೂ ಹಬ್ಬ ಹಾಗೂ ವಿಶೇಷ ದಿನಗಳು ಬಂದರೇ, ಮಾರಾಟ ಮೇಳಗಳನ್ನು ಆಯೋಜಿಸಿ ಗ್ಯಾಡ್ಜೆಟ್ಸ್ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ಕೊಡುಗೆ ಘೋಷಿಸುತ್ತದೆ. ಇದೀಗ ಕ್ರಿಸ್‌ಮಸ್‌ ಪ್ರಯುಕ್ತ ಅಮೆಜಾನ್ ತಾಣವು 'ವಿವೋ ಕ್ರಿಸ್‌ಮಸ್‌ ಕಾರ್ನಿವಲ್' ಸೇಲ್ ಆಯೋಜಿಸಿದೆ.

ಅಮೆಜಾನ್‌ನಲ್ಲಿ ಕ್ರಿಸ್‌ಮಸ್‌ ಅಂಗವಾಗಿ ವಿವೋ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!

ಹೌದು, ಅಮೆಜಾನ್ ತಾಣವು ಕ್ರಿಸ್‌ಮಸ್‌ ಅಂಗವಾಗಿ 'ವಿವೋ ಕ್ರಿಸ್‌ಮಸ್‌ ಕಾರ್ನಿವಲ್' ಸೇಲ್ ಆಯೋಜಿಸಿದೆ. ಈ ಮಾರಾಟ ಮೇಳವು ಇದೇ ಡಿಸೆಂಬರ್ 22 ರಿಂದ ಡಿಸೆಂಬರ್ 25 ರ ವರೆಗೂ ಚಾಲ್ತಿ ಇರಲಿದೆ. ಈ ವೇಳೆ ವಿವೋ ಸಂಸ್ಥೆಯ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಸಿಗಲಿದೆ. ಹಾಗೆಯೇ ಯಾವುದೇ ಬ್ಯಾಂಕ್ ಕಾರ್ಡ್‌ ಮೇಲೆ 2,000ರೂ ವರೆಗೂ ರಿಯಾಯಿತಿ ತಿಳಿಸಿದೆ. ಇದರೊಂದಿಗೆ 9 ತಿಂಗಳು ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ತಾಣವು ಆಯೋಜಿಸಿರುವ 'ವಿವೋ ಕ್ರಿಸ್‌ಮಸ್‌ ಕಾರ್ನಿವಲ್' ಸೇಲ್ ಕೊಡುಗೆ ಪಡೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ V21 5G ಸ್ಮಾರ್ಟ್‌ಫೋನ್‌
ವಿವೋ V21 5G ಸ್ಮಾರ್ಟ್‌ಫೋನ್‌ 1,080x2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ವಿವೋ Y21 ಸ್ಮಾರ್ಟ್‌ಫೋನ್‌
ವಿವೋ Y21 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ (ಗಳು) IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್ ಓಎಸ್ 11.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಹೊಂದಿದೆ.

ವಿವೋ X60 ಸ್ಮಾರ್ಟ್‌ಫೋನ್‌
ವಿವೋ X60 ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, 12GB RAM + 256GB ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ವಿವೋ X60 ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ವಿವೋ Y33s ಸ್ಮಾರ್ಟ್‌ಫೋನ್‌
ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್‌ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ವಿವೋ Y73 ಸ್ಮಾರ್ಟ್‌ಫೋನ್‌
ವಿವೋ Y73 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫೋನ್ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Amazon Vivo Christmas Carnival: Big Deals On Vivo Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+