ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಬಿಗ್ ಡಿಸ್ಕೌಂಟ್!
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಅನೇಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಫೇವರೇಟ್ ಪ್ಲಾಟ್‌ಫಾರ್ಮ್ ಆಗಿದೆ. ಈ ದೈತ್ಯ ಇ ಕಾಮರ್ಸ್ ತಾಣವು ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತಲ್ಲೇ ಸಾಗಿದೆ. ಹಾಗೆಯೇ ವಿಶೇಷ ಸೇಲ್ ಸಂದರ್ಭಗಳಲ್ಲಿ ಹಾಗೂ ಹಬ್ಬದ ದಿನಗಳಲ್ಲಿ ಫೋನ್‌ಗಳಿಗೆ ಮತ್ತಷ್ಟು ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಯಾವುದೇ ವಿಶೇಷ ಸೇಲ್ ಮೇಳ ಇಲ್ಲದ ವೇಳೆಯು ಆಯ್ದ ಫೋನ್‌ಗಳಿಗೆ ಅಮೆಜಾನ್ ರಿಯಾಯಿತಿ ನೀಡಿರುತ್ತದೆ. ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ಲಭ್ಯ ಇದೆ. ಆ ಪೈಕಿ ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್, ಒಪ್ಪೋ, ವಿವೋ ಸೇರಿದಂತೆ ಇತರೆ ಬ್ರ್ಯಾಂಡ್ ಗಳ ಆಯ್ದ ಫೋನ್‌ಗಳಿಗೂ ಅಮೆಜಾನ್ ತಾಣವು ರಿಯಾಯಿತಿ ನೀಡಿದೆ. ಆಯ್ದ ಮಾಡೆಲ್ ಫೋನ್‌ಗಳಿಗೆ ಆಯ್ದ ಬ್ಯಾಂಕ್ ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಸಿಗಲಿದೆ. ಹಾಗಾದರೇ ಅಮೆಜಾನ್ ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಬಿಗ್ ಬ್ಯಾಟರಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಕಾರ್ಯನಿರ್ವಹಿಸಲಿದೆ. ಈ ಫೊನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಯಾಮ್‌ಸಂಗ್
ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ.


Click it and Unblock the Notifications