ಈ ಎಂಟ್ರಿ ಲೆವೆಲ್ ಫೋನಿಗೆ ಬಿಗ್ ಡಿಸ್ಕೌಂಟ್; 128GB ಸ್ಟೋರೇಜ್ ಆಯ್ಕೆ ಇದೆ!
ಇ ಕಾಮರ್ಸ್ ದಿಗ್ಗಜ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಆನ್‌ಲೈನ್ ಮೂಲಕ ಖರೀದಿ ಮಾಡುವ ಗ್ರಾಹಕರಿಗೆ ಹಾಟ್‌ಸ್ಪಾಟ್ ಆಗಿ ಬಿಂಬಿತವಾಗಿದೆ. ಈ ವೆಬ್‌ಸೈಟ್ ವಿಶೇಷವಾಗಿ ಸ್ಮಾರ್ಟ್‌ಫೊನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ರಿಯಲ್‌ಮಿ ಸಂಸ್ಥೆಯ ಪೊಕೊ C61 ಮೊಬೈಲ್ ಕೂಡಾ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಈ ಫೋನಿನತ್ತ ಗ್ರಾಹಕರು ನೋಡುವಂತಾಗಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G36 ಪ್ರೊಸೆಸರ್ ಅನ್ನು ಪಡೆದಿದ್ದು, ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ.
ಹೌದು, ಲೀಡಿಂಗ್ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ಪೊಕೊ C61 (POCO C61) ಫೋನ್ ಶೇ. 30% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ನ 6 GB + 128 GB ಸ್ಟೋರೇಜ್ ವೇರಿಯಂಟ್ 6,999ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಆಯ್ದ ಬ್ಯಾಂಕ್ ಕೊಡುಗೆಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಅಲ್ಲದೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರೊಂದಿಗೆ 4GB + 64GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಇನ್ನು ಇದು ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಪೊಕೊ C61 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಪೊಕೊ C61 - ಫೀಚರ್ಸ್
ಪೊಕೊ C61 ಸ್ಮಾರ್ಟ್‌ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಅನ್ನು ಪಡೆದುಕೊಂಡಿದ್ದು, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಒಳಗೊಂಡಿದೆ. ಇದರ ಜೊತೆಗೆ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್‌ಸ್ಯಾಂಪಲಿಂಗ್ ರೇಟ್ ಪಡೆದಿದೆ.
ಪೊಕೊ C61 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G36 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ವಿಆರ್ GE8320 ಜಿಪಿಯು ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲ ಒಳಗೊಂಡಿದೆ. ಅಲ್ಲದೇ ಈ ಫೋನ್ 4GB + 64GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಒಳಗೊಂಡಿದ್ದು, 6GB ವರೆಗಿನ ವರ್ಚುವಲ್ RAM ಆಯ್ಕೆ ಸಹ ಹೊಂದಿದೆ.
ಪೊಕೊ C61 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ದ್ವಿತೀಯ ಕ್ಯಾಮೆರಾ ಬೇಸಿಕ್ ಲೆನ್ಸ್ ಸಪೋರ್ಟ್ ಹೊಂದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಪೊಕೊ C61 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರ ಜೊತೆಗೆ 10W ವೈರ್ಡ್ ಚಾರ್ಜಿಂಗ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, 3.5mm ಆಡಿಯೊ ಜಾಕ್ ಆಯ್ಕೆ ಸಹ ಒಳಗೊಂಡಿದೆ. ಇದಲ್ಲದೇ 4G LTE, ಬ್ಲೂಟೂತ್ ಆವೃತ್ತಿ 5.4, ವೈ-ಫೈ 5 ಆಯ್ಕೆಗಳು ಕೂಡಾ ಪಡೆದಿದೆ.ಇನ್ನು ಈ ಮೊಬೈಲ್ ಡೈಮಂಡ್ ಡಸ್ಟ್ ಬ್ಲಾಕ್, ಎಥೆರಿಯಲ್ ಬ್ಲೂ ಮತ್ತು ಮಿಸ್ಟಿಕಲ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ.


Click it and Unblock the Notifications








