ರೆಡ್ಮಿಯ ಈ ಅಗ್ಗದ ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್!..5000mAh ಬ್ಯಾಟರಿ ಸೌಲಭ್ಯ!
ಜನಪ್ರಿಯ ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣವು ಆಯೋಜಿಸಿರುವ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2024 ಈಗ ಲೈವ್ ಇದೆ. ಈ ಸೇಲ್‌ನಲ್ಲಿ ಇತ್ತೀಚಿಗಿನ ಕೆಲವು ಆಯ್ದ ಮೊಬೈಲ್‌ಗಳು ಭಾರೀ ಆಕರ್ಷಕ ಡಿಸ್ಕೌಂಟ್ ತಿಳಿಸಿದ್ದು, ಈ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತಿದೆ. ಇದೀಗ ಅಮೆಜಾನ್ ವೆಬ್‌ಸೈಟ್‌ನಲ್ಲಿ ಶಿಯೋಮಿ ಸಂಸ್ಥೆಯ ರೆಡ್ಮಿ 13C (Redmi 13C) ಮೊಬೈಲ್ ಗ್ರಾಹಕರು OMG ಎನ್ನುವಂತಹ ಆಫರ್ ದರದಲ್ಲಿ ಲಭ್ಯ ಇದೆ.
ಹೌದು, ಅಮೆಜಾನ್ ಆಯೋಜಿಸಿರುವ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ 2024 ಮಾರಾಟದಲ್ಲಿ, ಆ ಪೈಕಿ ರೆಡ್ಮಿ 13C (Redmi 13C) ಮೊಬೈಲ್ ಅತ್ಯುತ್ತಮ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಶೇ. 36% ರಷ್ಟು ನೇರ ಡಿಸ್ಕೌಂಟ್ ಪಡೆದಿದ್ದು, ಈಗ 7,699ರೂ. ಗಳಿಗೆ ಖರೀದಿ ಮಾಡಬಹುದಾಗಿದೆ. ಇದಲ್ಲದೇ ಇತರೆ ಬ್ಯಾಂಕ್ ಕೊಡುಗೆ ಸಹ ಲಭ್ಯ ಆಗಲಿವೆ.

ಅಂದಹಾಗೆ ರೆಡ್ಮಿ ಸಂಸ್ಥೆಯ ಈ ಮೊಬೈಲ್ 6GB RAM + 128GB ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ಪಡೆದಿದ್ದು, ಹಾಗೆಯೇ ಇದು 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ 13C 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 5G ಫೀಚರ್ಸ್
ರೆಡ್ಮಿ 13 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ 13 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6 GB RAM + 128 GB ಹಾಗೂ 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದ ಜೊತೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ 13 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13 5G ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಈ ಮೊಬೈಲ್ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್ C ಚಾರ್ಜಿಂಗ್ ಸಪೋರ್ಟ್ ಒದಗಿಸುತ್ತದೆ.


Click it and Unblock the Notifications








