Home
Deal of the day

ಅಮೆಜಾನ್‌ನಲ್ಲಿ ಈ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳಿಗೆ ಬೆಸ್ಟ್‌ ಆಫರ್!

ಅಮೆಜಾನ್ ಸಂಸ್ಥೆಯು ಇ ಕಾಮರ್ಸ್‌ ವಲಯದಲ್ಲಿ ಹೆಚ್ಚು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಅಮೆಜಾನ್ ತಾಣವು ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿ ಗುರುತಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ವಿಶೇಷ ಕೊಡುಗೆ ನೀಡಿ ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತಲೇ ಸಾಗಿದೆ. ಇನ್ನು ಕೆಲವೊಮ್ಮೆ ವಯಾವುದೇ ವಿಶೇಷ ಮಾರಾಟ ಇಲ್ಲದಿದ್ದಾಗಲೂ ಆಯ್ದ ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿ ಲಭ್ಯ ಮಾಡುತ್ತದೆ.

ಅಮೆಜಾನ್‌ನಲ್ಲಿ ಈ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳಿಗೆ ಬೆಸ್ಟ್‌ ಆಫರ್!

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಬಜೆಟ್‌ ದರದ ಫೋನ್‌ಗಳಿಂದ ಹಿಡಿದು ಹೈ ಎಂಡ್ ಮಾಡೆಲ್ ಫೋನ್‌ಗಳ ವರೆಗೂ ಆಕರ್ಷಕ ರಿಯಾಯಿತಿ ನೀಡುತ್ತದೆ. ಹೊಸದಾಗಿ ಬಿಡುಗಡೆ ಆಗಿರುವ ಹಾಗೂ ಜನಪ್ರಿಯ ಫೀಚರ್ಸ್‌ಗಳನ್ನು ಹೊಂದಿರುವ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಹಾಗೆಯೇ ಅತ್ಯುತ್ತಮ ಕ್ಯಾಮೆರಾ ರಚನೆಯ ಪಡೆದ ಫೋನ್‌ಗಳಿಗೂ ಈಗ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕ್ಯಾಮೆರಾ ರಚನೆಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

English summary
Best Deals On These Camera Smartphones in Amazon: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+