ಬಜೆಟ್ ದರದಲ್ಲಿ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್‌ಫೋನ್ ಬೇಕಿದ್ರೆ, ಈ ಕೊಡುಗೆ ಸೂಕ್ತ!
ಜನಪ್ರಿಯ ಅಮೆಜಾನ್ ಮುಂಚೂಣಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿ ಕಾಣಿಸಿಕೊಂಡಿದೆ. ಈ ತಾಣವು ಆಕರ್ಷಕ ಕೊಡುಗೆಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ತನ್ನತ್ತ ಸೆಳೆದಿದೆ. ಪ್ರಮುಖವಾಗಿ ಮೊಬೈಲ್, ಗ್ಯಾಡ್ಜೆಟ್ಸ್ ಉತ್ಪನ್ನಗಳು ಸೇರಿದಂತೆ ಇತರೆ ವಸ್ತುಗಳಿಗೂ ಹೆಚ್ಚಿನ ಡಿಸ್ಕೌಂಟ್ ತಿಳಿಸುತ್ತದೆ. ಹಾಗೆಯೇ ವಿಶೇಷ ದಿನಗಳು ಅಥವಾ ತಿಂಗಳ ಕೊನೆಯ ದಿನಗಳ ಮಾರಾಟಗಳಲ್ಲಿ ಹೆಚ್ಚಿನ ಆಫರ್‌ಗಳನ್ನು ಗ್ರಾಹಕರಿಗೆ ಲಭ್ಯ ಮಾಡುತ್ತದೆ.

ಉತ್ತಮ ಆಫರ್ ಜೊತೆಗೆ ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರಾಹಕರಿಗೆ ಅತ್ಯುತ್ತಮ ಎಕ್ಸ್‌ಚೇಂಜ್ ಕೊಡುಗೆಗಳನ್ನು ಸಹ ನೀಡುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್ ಎಲ್ಲ ಮಾದರಿಯ ಮೊಬೈಲ್ ಫೋನ್‌ಗಳಿಗೂ ಆಫರ್ ಲಭ್ಯ ಮಾಡಿರುತ್ತದೆ. ಮುಖ್ಯವಾಗಿ ಬಜೆಟ್ ದರದಲ್ಲಿ ಲಭ್ಯ ಇರುವ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೂ ಅಮೆಜಾನ್ ಭರ್ಜರಿ ಕೊಡುಗೆಯನ್ನು ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಬೆಸ್ಟ್ ಕ್ಯಾಮೆರಾ ಫೋನ್‌ಗಳ ಕೊಡುಗೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್-ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications