Home
Deal of the day

ಬಜೆಟ್‌ ಬೆಲೆಯ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಆಫರ್!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್‌ ಶಾಪಿಂಗ್ ಗ್ರಾಹಕರಿಗೆ ನೆಚ್ಚಿನ ತಾಣ ಆಗಿದೆ. ಅಮೆಜಾನ್ ಇ ಕಾಮರ್ಸ್‌ ತಾಣವು ಮುಖ್ಯವಾಗಿ ಫೋನ್‌ಗಳಿಗೆ ಆಕರ್ಷಕ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಯತ್ನ ಮಾಡುತ್ತಲ್ಲೇ ಸಾಗಿದೆ. ಸ್ಪೆಷಲ್ ಸೇಲ್ ಸಂದರ್ಭಗಳಲ್ಲಿ ಹಾಗೂ ಹಬ್ಬದ ದಿನಗಳಲ್ಲಿ ಫೋನ್‌ಗಳಿಗೆ ಮತ್ತಷ್ಟು ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಬಜೆಟ್‌ ಬೆಲೆಯ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಬೊಂಬಾಟ್ ಆಫರ್!

ಹೌದು, ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ನೀಡುತ್ತದೆ. ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್, ಒನ್‌ಪ್ಲಸ್‌, ಒಪ್ಪೋ, ವಿವೋ, ಟೆಕ್ನೋ ಸೇರಿದಂತೆ ಇತರೆ ಬ್ರ್ಯಾಂಡ್‌ ಗಳ ಆಯ್ದ ಫೋನ್‌ಗಳಿಗೂ ಅಮೆಜಾನ್ ತಾಣವು ರಿಯಾಯಿತಿ ನೀಡಿದೆ. ಆಯ್ದ ಮಾಡೆಲ್ ಫೋನ್‌ಗಳಿಗೆ ಆಯ್ದ ಬ್ಯಾಂಕ್‌ ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯ ವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128 GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್ಕೋ ರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

iQOO Z3 ಸ್ಮಾರ್ಟ್‌ಫೋನ್‌
iQOO Z3 ಸ್ಮಾರ್ಟ್‌ಫೋನ್‌ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ + ಎಲ್‌ಸಿಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8 GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿ ಯನ್ನು ಬೆಂಬಲಿಸಲಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಪಡೆದುಕೊಂಡಿದೆ.

ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌

ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

English summary
Best Discount On These Budget Smartphones On Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+