ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಇದೀಗ ಭರ್ಜರಿ ಡಿಸ್ಕೌಂಟ್!

ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿರುವ ಅಮೆಜಾನ್ ಭಾರಿ ಡಿಸ್ಕೌಂಟ್‌ ಮಾರಾಟ ಮೇಳಗಳ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಮೊಬೈಲ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಡಿವೈಸ್‌ಗಳಿಗೆ ಅಧಿಕ ರಿಯಾಯಿತಿ ನೀಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಅಮೆಜಾನ್ ಅಚ್ಚುಮೆಚ್ಚಿನ ಶಾಪಿಂಗ್ ಪ್ಲಾಟ್‌ಫಾರ್ಮ್ ಎನಿಸಿದೆ ಆಗಿದೆ. ಜನಪ್ರಿಯ ಬ್ರ್ಯಾಂಡ್‌ಗಳ ಹೊಸ ಸ್ಮಾರ್ಟ್‌ಫೋನ್‌ಗಳಿಗೂ ಡಿಸ್ಕೌಂಟ್ ನೀಡಿ, ಮೊಬೈಲ್‌ಸ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಇದೀಗ ಭರ್ಜರಿ ಡಿಸ್ಕೌಂಟ್!

ಇನ್ನು ಅಮೆಜಾನ್‌ ತಾಣವು ಯಾವುದೇ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ನೀಡುತ್ತದೆ. ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೂ ಬೊಂಬಾಟ್ ಆಫರ್ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಅತ್ಯುತ್ತಮ ಕೊಡುಗೆ ಲಭ್ಯ ಮಾಡಿದೆ. ಹಾಗೆಯೇ ಅಮೆಜಾನ್ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ.‌ ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ರೆಡ್ಮಿ ನೋಟ್ 10S ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X