Home
Deal of the day

ಈ ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಆಕರ್ಷಕ ರಿಯಾಯಿತಿ!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್‌ ಶಾಪಿಂಗ್ ಗ್ರಾಹಕರಿಗೆ ಹಾಟ್‌ ಫೇವರೇಟ್ ತಾಣ ಆಗಿದೆ. ಅಮೆಜಾನ್ ಇ ಕಾಮರ್ಸ್‌ ತಾಣವು ಮುಖ್ಯವಾಗಿ ಗ್ಯಾಡ್ಜೆಟ್ಸ್‌ಗಳಿಗೆ, ಇದರಲ್ಲಿಯೂ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ನೀಡಿವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಇನ್ನು ಸ್ಪೆಷಲ್ ಮಾರಾಟ ಸಂದರ್ಭಗಳಲ್ಲಿ ಹೆಚ್ಚಿನ ಕೊಡುಗೆ ನೀಡುತ್ತದೆ. ಹಾಗೆಯೇ ಸ್ಪೆಷಲ್ ಮಾರಾಟ ಇಲ್ಲದ ವೇಳೆಯು ರಿಯಾಯಿತಿ ನೀಡುತ್ತದೆ.

ಈ ಅಗ್ಗದ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಆಕರ್ಷಕ ರಿಯಾಯಿತಿ!

ಹೌದು, ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ನೀಡುತ್ತದೆ. ಶಿಯೋಮಿ, ರಿಯಲ್‌ಮಿ, ಸ್ಯಾಮ್‌ಸಂಗ್, ಒನ್‌ಪ್ಲಸ್‌, ಒಪ್ಪೋ, ವಿವೋ, ಟೆಕ್ನೋ ಸೇರಿದಂತೆ ಇತರೆ ಬ್ರ್ಯಾಂಡ್‌ ಗಳ ಆಯ್ದ ಬಜೆಟ್‌ ಫೋನ್‌ಗಳಿಗೂ ಅಮೆಜಾನ್ ತಾಣವು ರಿಯಾಯಿತಿ ನೀಡಿದೆ. ಆಯ್ದ ಮಾಡೆಲ್ ಫೋನ್‌ಗಳಿಗೆ ಆಯ್ದ ಬ್ಯಾಂಕ್‌ ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಬಜೆಟ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10S ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿ ಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. 5000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು ಯುಎಸ್‌ಬಿ ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ.

English summary
Best Discounts On These Budget Smartphone On Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+