Home
Deal of the day

ಆಫರ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಹಾಗಿದ್ರೆ ಇಲ್ಲಿ ಗಮನಿಸಿ!

ಅಮೆಜಾನ್ ತಾಣವು ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್ ಆಗಿ ಕಾಣಿಸಿಕೊಂಡಿದೆ. ಮುಖ್ಯವಾಗಿ ಅಮೆಜಾನ್ ಒಂದಿಲ್ಲೊಂದು ವಿಶೇಷ ಸೇಲ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಅಮೆಜಾನ್ ತಾಣವು ಆಯೋಜಿಸುವ ಹಬ್ಬದ ವಿಶೇಷ ಸೇಲ್‌ಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಇರುತ್ತದೆ. ಹಾಗೆಯೇ ಸ್ಪೆಷಲ್ ಸೇಲ್ ಹೊರತುಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಆಫರ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಹಾಗಿದ್ರೆ ಇಲ್ಲಿ ಗಮನಿಸಿ!

ಹೌದು, ರಿಯಾಯಿತಿ ಬೆಲೆಯಲ್ಲಿ ಇತ್ತೀಚಿನ ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಅಮೆಜಾನ್ ತಾಣ ಸೂಕ್ತ. ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳ ಆಯ್ದ ಫೋನ್‌ಗಳಿಗೂ ಬೊಂಬಾಟ್ ಡಿಸ್ಕೌಂಟ್‌ ಲಭ್ಯ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ, ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಆಯ್ಕೆ ಸಹ ಲಭ್ಯವಾಗಲಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದ ಕೆಲವು ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌
ರೆಡ್‌ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಫೋನ್ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೊ A31 ಸ್ಮಾರ್ಟ್‌ಫೋನ್‌
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ ಓಎಸ್‌ ಹಾಗೂ ಕಲರ್ ಓಎಸ್ 6 ಸಪೋರ್ಟ್‌ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB+128GB ವೇರಿಯಂಟ್ ಆಯ್ಕೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಹೊಂದಿದ್ದು, ಹಾಗೂ ತೃತೀಯ ಕ್ಯಾಮೆರಾ ಸಹ 2ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ ಈ ಫೊನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಎಡಿಷನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ.

English summary
Best Offers On These Smartphones On Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+