Home
Deal of the day

5000mAh ಬ್ಯಾಟರಿ ಇರುವ Vivo ಸಂಸ್ಥೆಯ ಈ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಭಾರತೀಯ ಟೆಕ್ ಮಾರುಕಟ್ಟೆಯಲ್ಲಿ ವಿವೋ ಕಂಪನಿಯು ಭಿನ್ನ ಶ್ರೇಣಿಯ ಮೊಬೈಲ್‌ಗಳ ಮೂಲಕ ಈಗಾಗಲೇ ತನ್ನದೇ ಸ್ಥಾನ ಖಚಿತಪಡಿಸಿಕೊಂಡಿದೆ. ಸಂಸ್ಥೆಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಆ ಪೈಕಿ ವಿವೋ T3 ಲೈಟ್‌ 5G (vivo T3 Lite 5G) ಮೊಬೈಲ್‌ ಕೂಡಾ ಒಂದಾಗಿದ್ದು, ಈ ಮೊಬೈಲ್‌ ಇದೀಗ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಖರೀದಿದಾರರು ವಾವ್‌ ಎನ್ನುವಂತೆ ಆಗಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ವಿವೋ T3 ಲೈಟ್‌ 5G (vivo T3 Lite 5G) ಫೋನ್‌ ಬೆಲೆಯಲ್ಲಿ ಈಗ ಶೇ. 27% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಇದೀಗ 10,499ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಸಿಗುತ್ತದೆ. ಹಾಗೆಯೇ ಅಮೆಜಾನ್‌ ಇ ಕಾಮರ್ಸ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ, ಇಎಮ್‌ಐ ಸೌಲಭ್ಯಗಳನ್ನು ಪಡೆದುಕೊಂಡರೆ ಮತ್ತಷ್ಟು ಕೊಡುಗೆ ಪಡೆಯಬಹುದು.

5000mAh ಬ್ಯಾಟರಿ ಇರುವ Vivo ಸಂಸ್ಥೆಯ ಈ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಈ ಫೋನ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈ ಫೋನ್‌ ಖರೀದಿಗೆ ಲಭ್ಯ ಆಗಲಿದೆ. ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗಾದರೇ ವಿವೋ T3 ಲೈಟ್‌ 5G ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಲೈಟ್‌ 5G - ಫೀಚರ್ಸ್‌

ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಮಾಡುತ್ತದೆ.

ವಿವೋ T3 ಲೈಟ್‌ 5G ಫೋನ್‌ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಪಡೆದಿದೆ.

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
Biggest Price Drop on vivo T3 Lite 5G on Flipkart website. check out more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+