ಬಂಪರ್ ಆಫರ್..! 50,000 ರಿಯಾಯಿತಿ.. 95,999 ಬೆಲೆಯ ದೈತ್ಯ ಫೋನ್... ಕೇವಲ 26,999ಕ್ಕೆ ಲಭ್ಯ; ಮನಸೋತ ಗ್ರಾಹಕರು
ಪ್ರಸ್ತುತ ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಇತ್ತೀಚೆಗೆ, ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮಾರಾಟವೂ ಹೆಚ್ಚಾಗಿದೆ. ಅದರಂತೆ, ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ನ ಪ್ರೀಮಿಯಂ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G (Samsung Galaxy S23 5G) ಫೋನಿನ ಖರೀದಿ ಮೇಲೆ ಬಂಪರ್ ಆಫರ್ ಘೋಷಿಸಲಾಗಿದೆ. ನೀವು, ಈ ಸ್ಯಾಮ್‌ಸಂಗ್ ಫೋನನ್ನು ಅರ್ಧದಷ್ಟು ಬೆಲೆಗೆ ಖರೀದಿಸಬಹುದು. ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಪ್ರೀಮಿಯಂ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವವರಿಗೆ, ಬಜೆಟ್ ಸ್ವಲ್ಪ ಮುಖ್ಯವಾಗಿರುತ್ತದೆ. ಪ್ರಸ್ತುತ, ಫ್ಲಿಪ್‌ಕಾರ್ಟ್ ಸ್ಯಾಮ್‌ಸಂಗ್‌ನ ಸೂಪರ್ ಪ್ರೀಮಿಯಂ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ S23 ಫೋನಿನ 256GB ರೂಪಾಂತರದ ಮೇಲೆ ದೊಡ್ಡ ರಿಯಾಯಿತಿ ಘೋಷಿಸಿದೆ. ಈ ಫೋನಿಗೆ 50,000 ರೂ. ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಅಂದರೆ, ಶೇ.56 ರಷ್ಟು ಬಿಗ್ ಡಿಸ್ಕೌಂಟ್ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಮೊಬೈಲ್‌ನ 256GB ರೂಪಾಂತರದ ಬೆಲೆ 95,999 ರೂ. ಇದೆ. ಈ ಫೋನ್, ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 41,999 ರೂ.ಗಳಿಗೆ ಲಭ್ಯವಿದೆ.

ಕೇವಲ 26,999 ರೂ.ಗೆ ಮಾರಾಟ
ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಈ ಸ್ಯಾಮ್‌ಸಂಗ್ ಫೋನ್ ಖರೀದಿಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಐಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳಲ್ಲಿ 750 ರೂ. ವರೆಗೆ ಹೆಚ್ಚುವರಿ ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ, ಹಳೆಯ ಸ್ಮಾರ್ಟ್‌ಫೋನ್ ಎಕ್ಸ್‌ಚೇಂಜ್ ಮಾಡಿಕೊಂಡರೆ, ನಿಮಗೆ 39,150 ರೂ. ವರೆಗೆ ಡಿಸ್ಕೌಂಟ್ ಲಭ್ಯವಿದೆ. ನೀವು 15,000 ರೂ.ಗಳ ಎಕ್ಸ್‌ಚೇಂಜ್ ಆಫರ್ ಲಾಭ ಪಡೆಯಬಹುದು. ಇದರೊಂದಿಗೆ ಈ ಫೋನನ್ನು ಕೇವಲ 26,999 ರೂ.ಗೆ ನಿಮ್ಮದಾಗಿಸಿಕೊಳ್ಳಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಸ್ಮಾರ್ಟ್‌ಫೋನ್ 6.1 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ ಮತ್ತು 1,750 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.
ಕ್ವಾಲ್ಕಾಮ್ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಮೊಬೈಲ್‌ನ ಶಕ್ತಿಶಾಲಿ ಕಾರ್ಯಕ್ಷಮತೆಯಲ್ಲಿ ಸರಿಸಾಟಿಯಿಲ್ಲ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ OneUI 5.1 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್, 8GB RAM + 512GB ಸ್ಟೋರೇಜ್ ಆಯ್ಕೆ ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬೊಂಬಾಟ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 5G ಸ್ಮಾರ್ಟ್‌ಫೋನ್ 3900mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G LTE, ವೈ-ಫೈ 6, ಬ್ಲೂಟೂತ್ 5.3 ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








