Home
Deal of the day

ಆಫರ್‌ ಮುಗಿದ್ರೂ, ಅಮೆಜಾನ್‌ನಲ್ಲಿ ಈ ರೆಡ್ಮಿ ಫೋನ್‌ಗಳು ಆಕರ್ಷಕ ಬೆಲೆಗೆ ಲಭ್ಯ!

ಇತ್ತೀಚಿಗೆ ಆನ್‌ಲೈನ್‌ ಮಾರುಕಟ್ಟೆ ಹೆಚ್ಚು ಜನಪ್ರಿಯ ಆಗುತ್ತಿದೆ. ಈ ನಿಟ್ಟಿನಲ್ಲಿ ಇ ಕಾಮರ್ಸ್‌ ದೈತ್ಯ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಭರ್ಜರಿ ಕೊಡುಗೆಗಳನ್ನು ಘೋಷಿಸುತ್ತ ಮುನ್ನಡೆದಿವೆ. ಆ ಪೈಕಿ ಅಮೆಜಾನ್ ತಾಣ ಬಹುತೇಕ ಗ್ರಾಹಕರ ಫೇವರೇಟ್ ಶಾಪಿಂಗ್ ಅಡ್ಡಾ ಎನಿಸಿಕೊಂಡಿದೆ. ಅಮೆಜಾನ್ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇಋಇದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಒಂದಿಲ್ಲೊಂದು ಆಕರ್ಷಕ ರಿಯಾಯಿತಿ ನೀಡಿರುತ್ತವೆ.

ಆಫರ್‌ ಮುಗಿದ್ರೂ, ಅಮೆಜಾನ್‌ನಲ್ಲಿ ಈ ರೆಡ್ಮಿ ಫೋನ್‌ಗಳು ಆಕರ್ಷಕ ಬೆಲೆಗೆ ಲಭ್ಯ!

ರಿಯಾಯಿತಿ ದರದಲ್ಲಿ ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಅಮೆಜಾನ್ ಸೂಕ್ತ ತಾಣ ಎನಿಸಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣವು ವಿಶೇಷ ದಿನಗಳನ್ನು ಹೊರತು ಪಡಿಸಿಯೂ, ಜನಪ್ರಿಯ ಫೋನ್‌ಗಳಿಗೆ ಕೊಡುಗೆ ನೀಡಿರುತ್ತದೆ. ಹಾಗೆಯೇ ಕೆಲವು ಸಂದರ್ಭಗಳಲ್ಲಿ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್‌ ಡಿಸ್ಕೌಂಟ್‌ ಸಹ ಲಭ್ಯ ಇರುತ್ತವೆ. ಸದ್ಯ ರೆಡ್ಮಿ ಕಂಪನಿಯ ಕೆಲವು ಜನಪ್ರಿಯ ಫೋನ್‌ಗಳು ಆಕರ್ಷಕ ದರದಲ್ಲಿ ಕಾಣಿಸಿ ಕೊಂಡಿವೆ. ಹೀಗಾಗಿ ಹೊಸ ಫೋನ್ ಖರೀದಿಸುವ ಬಹುತೇಕ ಗ್ರಾಹಕರು ಅಮೆಜಾನ್‌ ಆಯ್ಕೆ ಮಾಡುತ್ತಾರೆ. ಹಾಗಾದರೇ ಅಮೆಜಾನ್‌ನಲ್ಲಿ ಆಕರ್ಷಕ ದರದಲ್ಲಿ ಕಾಣಿಸಿಕೊಂಡ ರೆಡ್ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಹಾಗೆಯೇ 6GB RAM ಮತ್ತು 64GB, 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಜೊತೆಗೆ ಹಿಂಬದಿಯಲ್ಲಿ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ.‌ ಹಾಗೆಯೇ ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್‌ ನೈಟ್‌, ಗ್ಲಾಸಿಲ್‌ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.

ರೆಡ್ಮಿ 9 ಸ್ಮಾರ್ಟ್‌ಫೋನ್
ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯ ಗಳನ್ನು ಹೊಂದಿದೆ. ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆ ಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಈ ಫೋನ್ ಒದಗಿಸಲಾಗಿದೆ.

ರೆಡ್ಮಿ ನೋಟ್‌ 10 ಲೈಟ್ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್‌
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆ ಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಈ ಫೋನ್ ಒಳಗೊಂಡಿದೆ.

English summary
Buy These Redmi Phones At Discount Price On Amazon. Check Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+