ವೇಗದ ಪ್ರೊಸೆಸರ್ ಇರುವ ಈ ಸ್ಟೈಲಿಶ್ ಫೋನಿಗೆ ಭರ್ಜರಿ ಡಿಸ್ಕೌಂಟ್!..ನೀವು ಖರೀದಿಸ್ತೀರಾ?
ಜನಪ್ರಿಯ ಫ್ಲಿಪ್‌ಕಾರ್ಟ್ (Flipkart) ಇ ಕಾಮರ್ಸ್ ವೆಬ್‌ಸೈಟ್ ಶಾಪಿಂಗ್ ಪ್ರಿಯರನ್ನು ಸೆಳೆಯಲು ಆಕರ್ಷಕ ಕೊಡುಗೆಗಳನ್ನು ಘೋಷಿಸುತ್ತಾ ಸಾಗಿದೆ. ಪ್ರಸ್ತುತ ದೀಪಾವಳಿ ಹಬ್ಬದ ಪ್ರಯುಕ್ತ ಫ್ಲಿಪ್‌ಕಾರ್ಟ್ ನಲ್ಲಿ ರಿಯಾಯಿತಿಯ ಸುರಿಮಳೆ ಜೋರಾಗಿದ್ದು, ಡಿಸ್ಕೌಂಟ್‌ನಲ್ಲಿ ಉತ್ಪನ್ನಗಳನ್ನು ಖರೀದಿಸಲು ಇಚ್ಛಿಸುವ ಗ್ರಾಹಕರಿಗೆ ಉತ್ತಮ ವೇದಿಕೆ ಎನಿಸಿದೆ. ಈ ತಾಣದಲ್ಲಿ ಆಯ್ದ ಮೊಬೈಲ್‌ಗಳು ಭಾರೀ ಆಫರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ CMF Phone 1 ಫೋನ್ ಕೂಡಾ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ CMF Phone 1 ಫೋನ್ ಶೇ. 25% ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 6 GB RAM + 128 GB ವೇರಿಯಂಟ್ 14,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್ ಆಫರ್ ಜೊತೆಗೆ ಎಕ್ಸ್‌ಚೇಂಜ್ ಡಿಸ್ಕೌಂಟ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು 12,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸಬಹುದು.

CMF Phone 1 ಫೋನ್ ಬ್ಲ್ಯಾಕ್, ಲೈಟ್ ಗ್ರೀನ್, ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆ ಪಡೆದಿದ್ದು, ಇದರೊಂದಿಗೆ 6GB RAM + 128 GB ಹಾಗೂ 8GB RAM + 128 GB ಸ್ಟೋರೇಜ್ ವೇರಿಯಂಟ್ ಪಡೆದಿದೆ. ಅಲ್ಲದೇ ಮೊಬೈಲ್ ಬ್ಯಾಕ್ ಕವರ್ ಬದಲಾಯಿಸುವ ಆಯ್ಕೆ ಇದರ ಪ್ರಮುಖ ಹೈಲೈಟ್ ಎನಿಸಿದೆ. ಹಾಗಾದರೇ CMF Phone 1 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
CMF Phone 1 - ಫೀಚರ್ಸ್ ಹೀಗಿವೆ
CMF Phone 1 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 2000 nits ಬ್ರೈಟ್ನೆಸ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಮಾಡುತ್ತದೆ.
CMF Phone 1 ಸ್ಮಾರ್ಟ್‌ಫೋನ್ 6 GB RAM + 128 GB ಹಾಗೂ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಇದೆ.
CMF Phone 1 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಸೈಡ್ ಮೌಂಟ್ ಫಿಂಗರ್ ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಫೋನಿನ ಬ್ಯಾಕ್ ಕವರ್ ಬದಲಾಯಿಸುವ ಆಯ್ಕೆ ಈ ಫೋನಿನಲ್ಲಿ ಇರುವುದು ವಿಶೇಷ ಆಗಿದೆ.


Click it and Unblock the Notifications








