ಹೊಸ Samsung ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಇದು ಎಂಥಾ ಆಫರ್!
ಆನ್‌ಲೈನ್ ಮೂಲಕ ಭಾರೀ ಡಿಸ್ಕೌಂಟ್ ದರದಲ್ಲಿ ನೂತನ ಸ್ಯಾಮ್‌ಸಂಗ್ (Samsung) ಸ್ಮಾರ್ಟ್‌ಫೋನ್ ಖರೀದಿ ಮಾಡುವ ಪ್ಲ್ಯಾನ್ ಮಾಡಿದ್ದಿರಾ? ಹಾಗಿದ್ರೆ, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಘೋಷಿಸಿರುವ ಈ ಕೊಡುಗೆ ನಿಮಗೆ ಉಪಯುಕ್ತ ಎನಿಸಬಹುದು. ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಸದ್ಯ ಫ್ಲ್ಯಾಗ್‌ಶಿಪ್ ಸೇಲ್ (Flipkart Flagship Sale) ಅನ್ನು ಆಯೋಜಿಸಿದ್ದು, ಈ ಮೇಳದಲ್ಲಿ ಸ್ಯಾಮ್‌ಸಂಗ್‌ನ ಈ 5G ಮೊಬೈಲ್ ಬಲು ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G (Samsung Galaxy F15 5G) ಮೊಬೈಲ್ ನೇರವಾಗಿ ಶೇ. 18%% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 12,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ರಿಯಾಯಿತಿ ಕೂಡಾ ಸಿಗುತ್ತದೆ.

ಇನ್ನು ಈ ಮೊಬೈಲ್ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆಯನ್ನು ಇದು ಒಳಗೊಂಡಿದೆ. ಅಲ್ಲದೇ ಇದು ಬ್ಲ್ಯಾಕ್, ಗ್ರೀನ್ ಮತ್ತು ವೈಲೆಟ್ ಕಲರ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ V ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯ ದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹೊಂದಿದ್ದು, 90 Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಅವಕಾಶ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇವೆ. ಇದರೊಂದಿಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ.


Click it and Unblock the Notifications








