Home
Deal of the day

ವೇಗದ ಪ್ರೊಸೆಸರ್‌ ಇರುವ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ ಇ ಕಾಮರ್ಸ್ ದೈತ್ಯ ಅಮೆಜಾನ್‌ ತಾಣವು ಅಮೆಜಾನ್ ಗ್ರೇಟ್ ಫ್ರೀಡಮ್ ಸೇಲ್ ( Amazon Great Freedom Sale 2024 ) ಮೇಳವನ್ನು ಆಯೋಜಿಸಿದ್ದು, ಈ ಸೇಲ್‌ ಇದೇ ಆಗಷ್ಟ್‌ 12 ರ ವರೆಗೆ ಲೈವ್‌ ಇರಲಿದೆ. ಅಂದಹಾಗೆ ಈ ಮಾರಾಟದಲ್ಲಿ ಕೆಲವು ಆಯ್ದ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಲಾಗಿದ್ದು, ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಗಮನ ಸೆಳೆದಿದೆ. ಆ ಪೈಕಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE (Samsung Galaxy S21 FE 5G) ಫೋನ್‌ ವಾವ್‌ ಎನಿಸುವ ರಿಯಾಯಿತಿ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಫ್ಲ್ಯಾಗ್‌ಶಿಪ್‌ ಸೇಲ್‌ನಲ್ಲಿ ಮೊಟೊರೊಲಾ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE (Samsung Galaxy S21 FE 5G) ಫೋನ್‌ ಶೇ. 65% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 25,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಸಿಗಲಿದೆ.

ವೇಗದ ಪ್ರೊಸೆಸರ್‌ ಇರುವ ಸ್ಯಾಮ್‌ಸಂಗ್‌ನ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಇನ್ನು ಈ ಮೊಬೈಲ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಪವರ್‌ ಪಡೆದುಕೊಂಡಿದ್ದು, 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್ನು ಈ ಫೋನ್‌ ಆಲಿವ್, ಗ್ರ್ಯಾಫೈಟ್, ಲ್ಯಾವೆಂಡರ್ ಮತ್ತು ನ್ಯೂ ನೇವಿ ಬ್ಲೂ ಕಲರ್‌ ಆಯ್ಕೆಗಳನ್ನು ಪಡೆದಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೀಚರ್ಸ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಅಂಡರ್ ಡಿಸ್‌ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಸಾಮರ್ಥ್ಯದ ಆವೃತ್ತಿ ಪಡೆದುಕೊಂಡಿದೆ. ಇತ್ತೀಚಿನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಇದರ ಜೊತೆಗೆ ಈ ಆವೃತ್ತಿಯು 8GB + 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಅನ್ನು ಹೊಂದಿದೆ. ಹಾಗೆಯೇ ಎರಡನೇ ಮತ್ತು ಮೂರನೇ ಕ್ಯಾಮೆರಾಗಳು ಸಹ 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಹಾಗೆಯೇ ಇದು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಸೆಲ್ಫಿ ಕ್ಯಾಮೆರಾ ಸೌಲಭ್ಯ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಫೋನ್‌ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಪಡೆದುಕೊಂಡಿದೆ.

Best Mobiles in India

English summary
Exciting Price Drop Samsung Galaxy S21 FE 5G on Amazon Great Freedom Sale 2024. Check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+